ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಪೇಟೆ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಮೊಕ್ಕಾಂನಲ್ಲಿರುವ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಶನಿವಾರ ದೇವಸ್ಥಾನದ ಶ್ರೀ ಮುಖ್ಯಪ್ರಾಣ ದೇವರಿಗೆ ೧೦೮ ಪವಮಾನ ಕಲಶಾಭಿಷೇಕ, ಬಳಿಕ ದೇವಸ್ಥಾನದಲ್ಲಿ ನಡೆದ ಲಘು ವಿಷ್ಣುಹವನದ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುರ್ಣಾಹುತಿ ನೆರವೇರಿಸಿದರು.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಜಿ.ಮೋಹನದಾಸ ಭಟ್, ವೇದಮೂರ್ತಿ ಜಿ.ರಾಘವೇಂದ್ರ ಆಚಾರ್ಯ, ವೇದಮೂರ್ತಿ ಜಿ.ವೇದವ್ಯಾಸ ಆಚಾರ್ಯ, ದೇವಳದ ಮೊಕ್ತೇಸರ ಜಿ.ರಘುವೀರ ನಾಯಕ್, ಅಧ್ಯಕ್ಷ ಡಾ.ಕಾಶೀನಾಥ ಪೈ, ದೇವಳದ ಆಡಳಿತ ಮಂಡಳಿ ಸದಸ್ಯರು ಹಾಗೂ ಊರಿನ ಹತ್ತು ಸಮಸ್ತರು ಮತ್ತು ಜಿಎಸ್‌ಬಿ ಸಮಾಜ ಬಾಂಧವರು ಉಪಸ್ಥಿತರಿದ್ದರು.