ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ನಾಲ್ಕು ಸಂಸ್ಥೆಗಳಲ್ಲಿ ಸರಿಸುಮಾರು ನಾಲ್ಕು ಸಾವಿರ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಬರುವ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಆರಂಭದ ದಿನಗಳಿಂದಲೇ ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಸಂಸ್ಥೆಯಾಗಿದ್ದು, ವಿಶ್ವವಿದ್ಯಾನಿಲಯದ ಗಮನ ಸೆಳೆದಿದೆ. ಈ ಸಂಸ್ಥೆಗೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ನೂತನವಾಗಿ ಆರಂಭಗೊಂಡ ಬಿ.ಸಿ.ಎ. ಪದವಿ ಸೇರಿ ಸುಮಾರು ೪೦೦ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿರುವುದು ಗಮನಾರ್ಹ. ವಿದ್ಯಾರ್ಥಿಗಳು ಪಠ್ಯೇದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡು ಭವಿಷ್ಯದಲ್ಲಿ ಸತ್ಪ್ರಜೆಗಳಾಗಬೇಕೆಂದು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು.
ಅವರು 2016-17ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ತರಗತಿಗಳಿಗೆ ಪ್ರವೇಶಾತಿಗೊಂಡ ವಿದ್ಯಾರ್ಥಿಗಳಿಗೆ ಕಾಲೇಜಿನ ನೂತನ ಸಭಾಂಗಣದಲ್ಲಿ ಹಮ್ಮಿಕೊಂಡ ಪೂರ್ವ ಪರಿಚಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ವಿವಿಧ ಸಂಘ ಮತ್ತು ವೇದಿಕೆಯ ಸಂಯೋಜಕರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಭಾರ ಪ್ರಾಂಶುಪಾಲ ರಾಜೇಶ್ ಶೆಟ್ಟಿ ಸ್ವಾಗತಿಸಿದರು. ವಾಣಿಜ್ಯ ಉಪನ್ಯಾಸಕ ಶ್ರೀ ವಿಘ್ನೇಶ್ವರ ರಾವ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.