ಗಂಗೊಳ್ಳಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಸಾಮಾಜಿಕ ಕೆಲಸಗಳಲ್ಲಿ ಗುರಿ, ಪ್ರಾಮಾಣಿಕತೆ ಹಾಗೂ ಪಾರದರ್ಶಕತೆ ಅತಿ ಮುಖ್ಯ. ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿರುವ ರೋಟರಿ ಸಂಸ್ಥೆಯು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದು, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಕೊಡುಗೆಳನ್ನು ನೀಡುತ್ತಿದೆ. ಇಂತಹ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವವರಿಗೆ ಜವಾಬ್ದಾರಿ ಹೆಚ್ಚಾಗಿದ್ದು, ಸಂಸ್ಥೆಯ ಪ್ರತಿಯೊಬ್ಬರು ತಾವು ಇಡುವ ಪ್ರತಿಯೊಂದು ಹೆಜ್ಜೆಗಳನ್ನು ಎಚ್ಚರಿಕೆಯಿಂದ ಇಡಬೇಕು ಎಂದು ನಟ, ಜಾದೂಗಾರ ಓಂಗಣೇಶ ಉಪ್ಪುಂದ ಹೇಳಿದರು.

Call us

Click Here

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ಜರಗಿದ ಗಂಗೊಳ್ಳಿ ರೋಟರಿ ಕ್ಲಬ್‌ನ 2016-17ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಗಂಗೊಳ್ಳಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷ ಎಂ.ಜಿ.ರಾಘವೇಂದ್ರ ಭಂಡಾರ್‌ಕಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಜಿಲ್ಲೆ ೩೧೮೨ರ ವಲಯ ೧ರ ಸಹಾಯಕ ಗವರ್ನರ್ ಮಧುಕರ ಹೆಗ್ಡೆ ಅವರು ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರು. ವಲಯ ಸೇನಾನಿ ಅಬು ಶೇಖ್ ಸಾಹೇಬ್ ಶುಭಾಶಂಸನೆಗೈದರು.

ಇತ್ತೀಚಿಗೆ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ನಾಲ್ಕನೇ ಮತ್ತು ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದ ಯು.ಚೈತ್ರಾ ಶ್ಯಾನುಭಾಗ್ ಅವರನ್ನು ಸನ್ಮಾನಿಸಲಾಯಿತು ಮತ್ತು ಎಸ್‌ಎಸ್‌ಎಲ್‌ಸಿ ಮತ್ತಯ ಪಿಯುಸಿ ಪರೀಕ್ಷೇಯಲ್ಲಿ ಅತ್ಯಧಿಕ ಅಂಕಗಳಿಸಿದ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ (ರಥಬೀದಿ)ಗೆ ಕೊಡುಗೆಯನ್ನು ನೀಡಲಾಯಿತು.

ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಪ್ರದೀಪ ಡಿ.ಕೆ. ಸ್ವಾಗತಿಸಿದರು. ಉಪನ್ಯಾಸಕ ಥೋಮಸ್ ಪಿ.ಎ. ಮತ್ತು ನಿಕಟಪೂರ್ವ ಕಾರ್ಯದರ್ಶಿ ಕೆ.ರಾಮನಾಥ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ನಾರಾಯಣ ಇ.ನಾಯ್ಕ್ ವಂದಿಸಿದರು.

Click here

Click here

Click here

Click Here

Call us

Call us

Leave a Reply