ಹಟ್ಟಿಯಂಗಡಿ ಗ್ರಾಮ ಸಭೆ: ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಟ್ಟಿಯಂಗಡಿ ಗ್ರಾಮ ಪಂಚಾಯತ್‌ನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕೂಡ್ಲು ಕನ್ಯಾನ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.

Call us

Click Here

ಹಟ್ಟಿಯಂಗಡಿ ಗ್ರಾಮ ಪಂಚಾಯತ್‌ನ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ರಾಜೀವ ಶೆಟ್ಟಿ ಅದ್ಯಕ್ಷತೆ ವಹಿಸಿ ಮಾತನಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೊರತೆ ಇರುವೂದರಿಂದ ಶಾಸಕರು ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ತಾಲೂಕು ಪಂಚಾಯತ್ ಸದಸ್ಯರು ಪಂಚಾಯತಿಗೆ ಅನುದಾನ ದೊರಕಿಸಿಕೊಡಿ ಎಂದು ಮನವಿ ಮಾಡಿದರು.

ಪಂಚಾಯತ್ ಉಪಾದ್ಯಕ್ಷ ಪ್ರತಾಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯೆ ಜ್ಯೋತಿ, ತಾಲೂಕು ಪಂಚಾಯತ್ ಸದಸ್ಯ ಕರುಣ್ ಪೂಜಾರಿ, ಎಲ್ಲಾ ಇಲಾಖೆಯ ಅಧಿಕಾರಿಗಳು, ಹಾಗೂ ಶಾಲಾ ಮುಖ್ಯ ಶಿಕ್ಷಕರುಗಳು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ಧರು.

ಶಿಕ್ಷಣ ಇಲಾಖೆಗೆ ಆರ್‌ಟಿಐ ಅಡಿಯಲ್ಲಿ ಸಿಗುವಂತ ಸೌಲಭ್ಯವನ್ನು ಗ್ರಾಮ ಪಂಚಾಯತ್ ಕೊಡುವ ಬಗ್ಗೆ ದೀರ್ಘ ಚರ್ಚೆಗಳು ನಡೆದವು, ಹಾಗೂ ಲಾಟರಿ ಮೂಲಕ ಆಯ್ಕೆ ಮಾಡುವುದನ್ನು ರದ್ಧು ಪಡಿಸಬೇಕೆಂದು ಗ್ರಾಮ ಸಭೆಯಲ್ಲಿ ನಿರ್ಣಯಿಸಲಾಯಿತು ಮತ್ತಿ ಇತರ ಕಾಮಗಾರಿಗಳ ಬಗ್ಗೆ ಸಾರ್ವಜನಿಕರು ಚರ್ಚಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿವಾಕರ ಶ್ಯಾನುಬಾಗ್ ಸ್ವಾಗತಿಸಿ ಧನ್ಯವಾದಗೈದರು.

Leave a Reply