ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಟ್ಕಳ-ಕುಂದಾಪುರಕ್ಕೆ ಶಾಲಾ-ಕಾಲೇಜು ಅವಧಿಯಲ್ಲಿ ಹೆಚ್ಚುವರಿ ಸರಕಾರಿ ಬಸ್ಸುಗಳನ್ನು ಬಿಡುವಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳ ತಂಡ ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗೀಯ ನಿಯಂತ್ರಕರಿಗೆ ಮನವಿ ಸಲ್ಲಿಸಿದರು. ಶಿರೂರು, ಬೈಂದೂರು, ಉಪ್ಪುಂದ ನಾವುಂದ ಭಾಗಗಳಿಂದ ಸುಮಾರು ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಕುಂದಾಪುರ ಮುಂತಾದೆಡೆ ಕಾಲೇಜುಗಳಿಗೆ ತೆರಳುತ್ತಿದ್ದು ಈ ಅವಧಿಯಲ್ಲಿ ಹೆಚ್ಚುವರಿ ಬಸ್ಸುಗಳಿಲ್ಲದ ಕಾರಣ ಬಸ್ಸುಗಳಲ್ಲಿ ನೂಕುನುಗ್ಗಲು ಉಂಟಾಗಿ ಅಪಾಯಕಾರ ಸಂದರ್ಭಗಳು ಎದುರಾಗುತ್ತಿದೆ. ಪಾಸ್ ಹೊಂದಿರುವ ವಿದ್ಯಾರ್ಥಿಗಳನ್ನು ಬಸ್ ಹತ್ತಿಸಿಕೊಳ್ಳಲು ಚಾಲಕ, ನಿರ್ವಾಹಕರು ಹಿಂದೇಟು ಹಾಕುತ್ತಿದ್ದಾರೆ. ಶೀಘ್ರವೇ ಈ ಭಾಗಕ್ಕೆ ಬಸ್ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಮನವಿಗೆ ಸ್ಪಂದಿಸಿದ ಅಧಿಕಾರಿಗಳು ವಿದ್ಯಾರ್ಥಿಗಳ ಸಮಸ್ಯೆಗೆ ಶೀಘ್ರವೇ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ. ಉಪ್ಪಂದ ಬಸ್ ಅಫಘಾತದಲ್ಲಿ ಕಾಲೇಜು ವಿದಾರ್ಥಿಯೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವಿದ್ಯಾರ್ಥಿ ಸಮೂಹ ಸಾರಿಗೆ ಇಲಾಖೆಯ ಅಸಹಕಾರ ಧೋರಣೆಯ ವಿರುದ್ದ ತಿರುಗಿ ಬಿದ್ದು ಗಂಟೆಗಳ ಕಾಲ ಹೆದ್ದಾರಿ ತಡೆ ನಡೆಸಿದ್ದರು. ಘಟನಾ ಸ್ಥಳಕ್ಕಾಗಮಿಸಿದ್ದ ಉಡುಪಿ ಎಸ್ಪಿ ಅಣ್ಣಾಮಲೈ ಸಾರಿಗೆ ಇಲಾಖೆಯ ಅಧಿಕಾರಿಗಳನ್ನು ಭೇಟಿ ಮಾಡಿಸುವ ಭರವಸೆ ನೀಡಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು ಪೊಲೀಸರೇ ವಿದ್ಯಾರ್ಥಿಗಳನ್ನು ತಮ್ಮ ವಾಹನದಲ್ಲಿ ಮಂಗಳೂರಿಗೆ ಕರೆದೊಯ್ದಿದ್ದರು. ವಿದ್ಯಾರ್ಥಿಗಳಾದ ರಾಘವೇಂದ್ರ ಹಾಗೂ ಪವಿತ್ರಾ ಶೆಟ್ಟಿ ಮುಂದಾಳತ್ವ ವಹಿಸಿದ್ದರು. ಕುಂದಾಪುರ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಭಂಡಾರ್‌ಕಾರ‍್ಸ್ ಕಾಲೇಜು ಹಾಗೂ ನಾವುಂದದ ರಿಚರ್ಡ್ ಅಲ್ಮೆಡಾ ಕಾಲೇಜಿನ ವಿದ್ಯಾರ್ಥಿಗಳು ಜೊತೆಗಿದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/
Read this
► ಉಪ್ಪುಂದಲ್ಲಿ ಬಸ್ಸುಗಳ ನಡುವೆ ಅಪಘಾತ. ಓರ್ವ ವಿದ್ಯಾರ್ಥಿ ದಾರುಣ ಸಾವು – http://kundapraa.com/?p=16035
► ಉಪ್ಪುಂದದಲ್ಲಿ ವಿದ್ಯಾರ್ಥಿ ಸಾವು: 2 ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ತಡೆ – http://kundapraa.com/?p=16049