ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಾಜ್ಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಯುವ ಮುಖಂಡ, ಕುಂದಾಪುರ ಕೋಡಿಯ ಮಹೇಶ್ ಕುಮಾರ್ ಪೂಜಾರಿ ನೇಮಕಗೊಂಡಿದ್ದಾರೆ. ಯುವಮೋರ್ಚಾದ ರಾಜ್ಯ ಕಾರ್ಯದರ್ಶಿ ತಮ್ಮೇಶಗೌಡ, ಮಹೇಶ್ ಅವರನ್ನು ಸದಸ್ಯರನ್ನಾಗಿ ನೇಮಿಸಿದ್ದಾರೆ.
ಸಿವಿಲ್ ಇಂಜಿನಿಯರ್ ಪದವೀಧರರಾದ ಮಹೇಶ್ ಕುಮಾರ್, ವಿದ್ಯಾರ್ಥಿ ದಿನಗಳಿಂದಲೂ ಸಮಾಜ ಸೇವೆ, ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದರು. ಮಣಿಪಾಲ ವಿಶ್ವವಿದ್ಯಾನಿಯಲದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಕಳೆದ ಸಾಲಿನಲ್ಲಿ ಜಿಲ್ಲಾ ಬಿಜೆಪಿ ಯುವಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ sಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.