ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: 94ಸಿ ಅರ್ಜಿದಾರರಿಗೆ ಶೀಘ್ರ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿಕೂಲಿಕಾರಡಿ ಸಂಘದ ನೇತೃತ್ವದಲ್ಲಿ ಇಲ್ಲಿನ ವಿಶೇಷ ತಹಶೀಲ್ದಾರರ ಕಛೇರಿಯ ಎದುರು ಪ್ರತಿಭಟನೆ ಜರುಗಿತು.
ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ರಾಜ್ಯ ಅಧ್ಯಕ್ಷ ನಿತ್ಯಾನಂದಸ್ವಾಮಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು, ಕೃಷಿಕೂಲಿಕಾರರ ಸಂಘದ ಮುಖಂಡರಾದ ವೆಂಕಟೇಶ ಕೋಣಿ, ಕೆ. ಶಂಕರ್, ಬಾಲಕೃಷ್ಣ ಶೆಟ್ಟಿ, ಸುರೇಶ್ ಕಲ್ಲಾಗರ, ರಾಜೀವ ಪಡುಕೋಣೆ, ಗಣೇಶ ತೊಂಡೆಮಕ್ಕಿ, ನಾಗರತ್ನ ನಾಡ, ಶೀಲಾವತಿ, ಮುತ್ತ ಮಾರ್ಕೊಡು ಮೊದಲಾದವರು ಉಪಸ್ಥಿತರಿದ್ದರು.