ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಕ್ತದಾನದ ಮಾಡುವ ಬಗೆಗೆ ಆತಂಕಗೊಳ್ಳಬೇಕಾಗಿಲ್ಲ. ವ್ಯಕ್ತಿಯೋರ್ವ ನಿಯಮಿತವಾಗಿ ರಕ್ತದಾನ ಮಾಡಿದರೇ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ. ಹಾಗಾಗಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ, ಜೀವ ಉಳಿಸುವ ಕಾರ್ಯಕ್ಕೆ ಮುಂದಾಗಬೇಕಿದೆ ಎಂದು ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಅಧ್ಯಕ್ಷ ಜಯಕರ್ ಶೆಟ್ಟಿ ಹೇಳಿದರು.
ಅವರು ಕುಂದಾಪುರ ಬಾರ್ ಅಸೋಸಿಯೇಷನ್ ನೇತೃತ್ವದಲ್ಲಿ ಕುಂದಾಪುರ ಇವರ ಪ್ರಾಯೋಜಕತ್ವದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಕಾರದೊಂದಿಗೆ ಜರುಗಿದ ವಕೀಲರ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕುಂದಾಪುರದ ವಕೀಲ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಮಾತನಾಡಿ ಎಲ್ಲಾ ದಾನಗಳಿಗಿಂತ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದೆ. ಆರೋಗ್ಯವಂತ ಮನುಷ್ಯನ ದೇಹದಲ್ಲಿ 5,000 ಮಿ.ಲಿ ರಕ್ತವಿದ್ದು, ರಕ್ತದಾನ ಮಾಡುವವರಿಂದ ಕೇವಲ 350 ಮಿ.ಲಿ ರಕ್ತವನ್ನು ಮಾತ್ರ ಪಡೆಯಲಾಗುತ್ತದೆ ಎಂದರು.
ಕುಂದಾಪುರದ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಎಚ್. ರವಿಶ್ಚಂದ್ರ ಶೆಟ್ಟಿ, ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಉಮೇಶ್ ಪುತ್ರನ್, ಕಾರ್ಯದರ್ಶಿ ವೈ ಸೀತಾರಾಮ್ ಶೆಟ್ಟಿ, ಡಾ. ಎಚ್. ಎಸ್. ಮಲ್ಲಿ ಉಪಸ್ಥಿತರಿದ್ದರು.