ಡಾ.ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆ, ಗುರುಗಳು ಮತ್ತು ಅಧ್ಯಯನ ಮಾಡುತ್ತಿರುವ ವಿಷಯದ ಬಗ್ಗೆ ಗೌರವ ಮತ್ತು ಪ್ರೀತಿಯನ್ನು ಹೊಂದಿರಬೇಕು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಕೆ. ಸದಾಶಿವ ರಾವ್ ಹೇಳಿದರು.

Call us

Click Here

ಅವರು ಕಾಲೇಜಿನ ಸಭಾಂಗಣದಲ್ಲಿ ಶೈಕ್ಷಣಿಕ ವರ್ಷ 2016-17ನೇ ಸಾಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ, ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಮತ್ತು ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ವಿಸ್ಮಿತಾ ಪರಿಚಯಿಸಿದರು, ಪ್ರಗತಿ ಸ್ವಾಗತಿಸಿದರು, ತನುಷ್ ಡಿ. ರಾವ್ ವಂದಿಸಿದರು, ಶ್ರೀವಿಭಾ ಕಾರ್ಯಕ್ರಮ ನಿರೂಪಿಸಿದರು.

Leave a Reply