ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಅಂಕಗಳ ಜೊತೆಗೆ ಮಾನವೀಯ ಸಂಬಂಧಗಳನ್ನು ಬೆಳೆಸುವುದು ಇಂಟರ‍್ಯಾಕ್ಟ್ ಕ್ಲಬ್‌ನ ಉದ್ದೇಶವಾಗಿದೆ ವಿದ್ಯಾರ್ಥಿ ಜೀವನದಲ್ಲಿಯೇ ನಾಯಕತ್ವ ಗುಣವನ್ನು ಬೆಳಸಿಕೊಂಡು ಸಮಾಜಿಕ ಜವಬ್ದಾರಿಯನ್ನು ನಿರ್ವಹಿಸುವ ಕೌಶಲ್ಯವನ್ನು ವೃದ್ಧಿಸಿಕೊಳ್ಳಿ ಎಂದು ಕುಂದಾಪುರ ರೋಟರಿ ಕ್ಲಬ್ ಅಧ್ಯಕ್ಷರಾದ ಉದಯ ಕುಮಾರ ಶೆಟ್ಟಿ ಹೇಳಿದರು.
ಅಂತರಾಷ್ಟ್ರೀಯ ರೋಟರಿ ಸಂಸ್ಥೆಯ ಅಂಗ ಸಂಸ್ಥೆಯಾದ ಇಂಟರ‍್ಯಾಕ್ಟ್ ಕ್ಲಬ್‌ನ ನೂನತನ ಪದಾಧಿಕಾರಿಗಳ ಪದಗ್ರಹಣವನ್ನು ಶ್ರೀ ಸಿದ್ಧಿವಿನಾಯಕ ವಸತಿಶಾಲೆ, ಹಟ್ಟಿಯಂಗಡಿಯಲ್ಲಿ ನೆರವೇರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲಾ ಉಪಪ್ರಾಂಶುಪಾಲರಾದ ರಾಮ ದೇವಾಡಿಗ ಅವರು, ಮಕ್ಕಳು ಸಣ್ಣ ವಯಸ್ಸಿನಲ್ಲೇ ಇಂತಹ ಸೇವಾ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಸ್ನೇಹಪರತೆ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬಹುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಕುಂದಾಪುರದ ರೋಟರಿ ಕ್ಲಬ್‌ನ ಇಂಟರ‍್ಯಾಕ್ಟ್ ಕ್ಲಬ್ ಛೇರ್‌ಮನ್ ರಾಘವೇಂದ್ರ ಚರಣ ನಾವಡ ಮಾಹಿತಿ ನೀಡಿದರು. ಶಾಲೆಯ ಇಂಟರ‍್ಯಾಕ್ಟ್ ಕ್ಲಬ್‌ನ ಅಧ್ಯಕ್ಷರಾದ ಗಣಪತಿ ಜಿ ಭಟ್ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಶೈಕ್ಷಣಿಕ ಸಲಹೆಗಾರರಾದ ಮೃದುಲಾ ಶಾನುಭಾಗ್, ಶಾಲೆಯ ಇಂಟರ‍್ಯಾಕ್ಟ್ಟ್ ಕ್ಲಬ್ ಕಾರ್ಯದರ್ಶಿ ಸುಹಾಸ, ಕುಂದಾಪುರ ರೋಟರಿ ಕ್ಲಬ್‌ನ ಸದಸ್ಯರಾದ ಎಚ್.ಎಸ್. ಹತ್ವಾರ್, ಪ್ರವೀಣ್‌ಕುಮಾರ್ ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಶಶಾಂಕ್ ಜಿ ಪೈ ಸ್ವಾಗತಿಸಿ, ಶಾಲೆಯ ಇಂಟರ‍್ಯಾಕ್ಟ್ ಕ್ಲಬ್‌ನ ಉಪಾಧ್ಯಕ್ಷರಾದ ರಾಕೇಶ್ ವಂದಿಸಿ, ಕಾರ್ತಿಕ್ ಎಸ್. ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.