ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಾಗೂರು ಶಾಖೆಯಲ್ಲಿ ಇ-ಸ್ಟಾಂಪಿಂಗ್ ಲೋಕಾರ್ಪಣೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ದೈನಂದಿನ ವ್ಯವಹಾರದೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಉದ್ದೇಶದಿಂದ ಆರಂಭಿಸಿರುವ ಇ-ಸ್ಟಾಂಪಿಂಗ್ ಸೌಲಭ್ಯ, ಠಸ್ಸೆ ಪತ್ರಕ್ಕಾಗಿ ದೂರದ ಊರುಗಳಿಗೆ ತೆರಳುತ್ತಿದ್ದ ಸಾರ್ವಜನಿಕ ಬಹಳಷ್ಟು ಅನುಕೂಲವಾಗಿದೆ. ಇಂದಿನ ದಿನಗಳಲ್ಲಿ ಸರಕಾರದ ಪ್ರತಿ ವ್ಯವಹಾರಕ್ಕೂ ಇ-ಸ್ಟಾಂಪ್ ಅಗತ್ಯವಿದ್ದು, ಈ ಸೌಲಭ್ಯದ ಸದುಪಯೋಗ ಎಲ್ಲರೂ ಪಡೆದುಕೊಳ್ಳುವಂತಾಗಲಿ ಎಂದು ಬೈಂದೂರು ವಿಶೇಷ ತಹಶಿಲ್ದಾರ್ ಕಿರಣ್ ಜಿ. ಗೌರಯ್ಯ ಹೇಳಿದರು.

Call us

Click Here

ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಇದರ ನಾಗೂರು ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೌಲಭ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಿಂಡಿಕೇಟ್ ಬ್ಯಾಂಕ್ ನಾಗೂರು ಶಾಖಾ ವ್ಯವಸ್ಥಾಪಕ ಚಂದ್ರಶೇಖರ ಎಸ್., ಕರ್ಣಾಟಕ ಬ್ಯಾಂಕ್ ನಾಗೂರು ಶಾಖಾ ವ್ಯವಸ್ಥಾಪಕ ಹರೀಶ್, ವಿಜಯಾ ಬ್ಯಾಂಕ್ ಖಂಬದಕೋಣೆ ಶಾಖಾ ವ್ಯವಸ್ಥಾಪಕ ಸುಕೇಶ್ ಕುಮಾರ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಾಗೂರು ಶಾಖಾ ವ್ಯವಸ್ಥಾಪಕ ಶಂಕರ ಶೆಟ್ಟಿ ಜಿ., ಮುಖ್ಯ ಅತಿಥಿಳಾಗಿದ್ದರು.

ಕಿರಿಮಂಜೇಶ್ವರ ಗ್ರಾಪಂ ಮಾಜಿ ಅಧ್ಯಕ್ಷರುಗಳಾದ ಈಶ್ವರ ದೇವಾಡಿಗ, ಸುಧಾಕರ ಶೆಟ್ಟಿ, ಉದ್ಯಮಿ ಗೋಕುಲ್ ಶೆಟ್ಟಿ, ಕಿರಿಮಂಜೇಶ್ವರ ಗ್ರಾಪಂ ಉಪಾಧ್ಯಕ್ಷ ಶೇಖರ ಖಾರ್ವಿ, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಉಪಾಧ್ಯಕ್ಷ ವಿನಾಯಕ ರಾವ್, ನಿರ್ದೇಶಕ ಮಂಜು ಪೂಜಾರಿ, ಗ್ರಾಪಂ ಸದಸ್ಯ ಮಂಜುನಾಥ ದೇವಾಡಿಗ, ಶೇಖರ ಪೂಜಾರಿ, ಆನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್‌ಸಿಡಿಸಿಸಿ ಬ್ಯಾಂಕಿನ ಶಿವರಾಮ ಪೂಜಾರಿ ಯಡ್ತರೆ ಸ್ವಾಗತಿಸಿದರು. ಶ್ರೀರಾಮ ಸೌಹಾರ್ದದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಧನ್ಯವಾದಗೈದರು. ಶಾಖಾ ವ್ಯವಸ್ಥಾಪಕ ರಾಜೇಂದ್ರ ದೇವಾಡಿಗ ಸಹಕರಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ನಿರೂಪಿದರು.

Click here

Click here

Click here

Click Here

Call us

Call us

Sriram Souharda credit co-operative Nagoor branch e-stamp (2) Sriram Souharda credit co-operative Nagoor branch e-stamp (4)Sriram Souharda credit co-operative Nagoor branch e-stamp (3)Sriram Souharda credit co-operative Nagoor branch e-stamp (5) Sriram Souharda credit co-operative Nagoor branch e-stamp (6) Sriram Souharda credit co-operative Nagoor branch e-stamp (7) Sriram Souharda credit co-operative Nagoor branch e-stamp (8)

Leave a Reply