ಕುಂದಾಪುರ, ಬೈಂದೂರು, ಬಸ್ರೂರಿನಲ್ಲಿ ಎಬಿವಿಪಿ ಪ್ರತಿಭಟನೆ. ಅಮ್ನೆಸ್ಟಿ ಇಂಟರ್‌ನ್ಯಾಶನಲ್ ನಿಷೇಧಕ್ಕೆ ಆಗ್ರಹ

Click Here

Call us

Call us

Call us

Call us

ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ನಿಷೇಧಕ್ಕೆ ಆಗ್ರಹ

Click Here

Call us

Click Here

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರಿನ ದಿ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಕಳೆದೊಂದು ವಾರದಿಂದ ನಡೆಯುತ್ತಿರುವ ಪ್ರತಿಭಟನೆ ಕಾವು ರಾಜ್ಯಾದಾದ್ಯಂತ ವ್ಯಾಪಿಸಿದ್ದು ಕುಂದಾಪುರ ತಾಲೂಕಿನಲ್ಲಿಯೂ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕುಂದಾಪುರ ಶಾಸ್ತ್ರೀ ವೃತ್ತದ ಬಳಿ ಭಂಡಾರ್‌ಕಾರ್ಸ್ ಕಾಲೇಜು ಹಾಗೂ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರೇ, ಬಸ್ರೂರಿನಲ್ಲಿ ಶ್ರೀ ಶಾರದಾ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬೈಂದೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಿವಾದಿತ ಸಂಸ್ಥೆಯ ವಿರುದ್ಧ ತನಿಕೆ ನಡೆಸುದಲ್ಲದೇ, ದೇಶದ ಅಖಂಡತೆಗೆ ಭಂಗ ಸಂಸ್ಥೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

Protest ABVP Byndoor protest Protest ABVP Basruru

Leave a Reply