ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ರಾಜ್ಯ ಗೃಹಸಚಿವ ಡಾ| ಜಿ. ಪರಮೇಶ್ವರ್ ಅವರು ಪತ್ನಿ ಕನ್ನಿಕಾ ಸಮೇತರಾಗಿ ಬೆಳಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.
ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಗ್ರಾ.ಪಂ. ಅಧ್ಯಕ್ಷ ವಿಶ್ವನಾಥ ಅಡಿಗ, ತಾ.ಪಂ. ಸದಸ್ಯೆ ಗ್ರೀಷ್ಮಾ ಭಿಡೆ, ತಾ.ಪಂ. ಮಾಜಿ ಸದಸ್ಯ ರಮೇಶ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.