ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರತಿಯೊಂದು ಮಗು ಹುಟ್ಟಿನಿಂದಲೇ ಮಾನವ ಹಕ್ಕುಗಳನ್ನು ಪಡೆದಿರುತ್ತದೆ. ಮಾನವ ಹಕ್ಕುಗಳಿಗೆ ಯಾವುದೇ ಜಾತಿ, ಧರ್ಮ, ಲಿಂಗ, ಮತ ಬೇಧಯಿಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ಈ ಹಕ್ಕು ಅನ್ವಯಿಸುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಪ್ರಜೆಯೂ ಮಾನವ ಹಕ್ಕುಗಳ ಕುರಿತು ಯೋಚಿಸಬೇಕಾದದ್ದು ಇಂದಿನ ತುರ್ತು ಎಂದು ಕಾಳಾವಾರ ವರದರಾಜ ಎಮ್. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೋಟೆಶ್ವರದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ನಿತ್ಯಾನಂದ ಎನ್. ಹೇಳಿದರು.
ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವ ಹಕ್ಕುಗಳ ಘಟಕದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಸಂಯೋಜಕಿ ಶ್ರೀಮತಿ ಅನಿತಾ ಅಲೈಸ್ ಡಿ’ಸೋಜಾ ಸ್ವಾಗತಿಸಿದರು. ಗಣಕಯಂತ್ರ ವಿಭಾಗದ ಉಪನ್ಯಾಸಕಿ ಕು. ವಿಜಯಲಕ್ಷ್ಮೀ ವಂದಿಸಿದರು. ವಿದ್ಯಾರ್ಥಿ ಪ್ರತಿನಿಧಿ ಪ್ರಿಯಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ದೀಪಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.









