ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬಳ್ಕೂರು ಗ್ರಾಮದಲ್ಲಿರುವ ಸರಕಾರಿ ಸ್ಥಳ ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಣೆ ಮಾಡಲು ಒತ್ತಾಯಿಸಿ ಬಳ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತ ಅರ್ಜಿದಾರರ ಬೃಹತ್ ಸಮಾವೇಶ ಬಳ್ಕೂರು ಗ್ರಾಮ ಪಂಚಾಯತ್ ಹಳೇ ಕಛೇರಿ ವಠಾರದಲ್ಲಿ ಜರಗಿತು.
ಸಿಐಟಿಯು ಕುಂದಾಪುರ ತಾಲೂಕು ಅಧ್ಯಕ್ಷ ಎಚ್. ನರಸಿಂಹ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ ಬಳ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುರುತಿಸಲಾದ ಸರಕಾರಿ ಸ್ಥಳ ಸುಮಾರು ೨೯ ಎಕ್ರೆಯನ್ನು ಬಡ ನಿವೇಶನ ರಹಿತರಿಗೆ ಹಕ್ಕು ಪತ್ರ ವಿತರಣೆ ಮಾಡುವುದಕ್ಕೆ ಕ್ರಮ ಕೈಗೊಳ್ಳಬೇಕೆಂದು ಸರಕಾರವನ್ನು ಒತ್ತಾಯಿಸಿದ್ದಾರೆ.
ಕೃಷಿ ಕೂಲಿಕಾರರ ಸಂಘದ ತಾಲೂಕು ಅಧ್ಯಕ್ಷ ರಾಜೀವ ಪಡುಕೋಣೆ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ – ಮುಖಂಡರಾದ ರಮೇಶ ಗುಲ್ವಾಡಿ, ಜ್ಯೋತಿ ಉಪಾಧ್ಯ, ಮಹಾಬಲ ಬಳ್ಕೂರು ಮೊದಲಾದವರು ಉಪಸ್ಥಿತರಿದ್ದರು.