ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಅರ್ಟ್ ಆಫ್ ಲೀವಿಂಗ್‌ನ ಶ್ರೀ ರವಿಶಂಕರ ಗುರೂಜಿ ತಮ್ಮ ಶಿಷ್ಯರೊಂದಿಗೆ ಮಂಗಳವಾರ ಕೊಲ್ಲೂರಿಗೆ ಭೇಟಿ ನೀಡಿ ಶ್ರೀಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಕಮಲಶಿಲೆಗೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಪಂಚಭಾಷಾ ಚಲನಚಿತ್ರ ನಟಿ ರಾಧಿಕಾ ತಮ್ಮ ಪತಿ ನಟ ಶರತ್‌ಬಾಬುಯೊಂದಿಗೆ ದೇವಳಕ್ಕೆ ಆಗಮಿಸಿ ಶ್ರೀ ದೇವಿಗೆ ವಿಶೇಷ ಪೂಜೆ ಹಾಗೂ ಚಂಡಿಕಾಹೋಮ ಸೇವೆ ಸಲ್ಲಿಸಿದರು. ದೇವಳದ ಪರವಾಗಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಇವರನ್ನು ಸ್ವಾಗತಿಸಿ ಪ್ರಸಾದ ನೀಡಿ ಗೌರವಿಸಿದರು.





