ಸರಸ್ವತಿ ವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶಿಕ್ಷಕರ ಬಗೆಗಿನ ಗೌರವ ಮತ್ತು ಪ್ರೀತಿ ಕೇವಲ ತೋರಿಕೆ ಮತ್ತು ತಾತ್ಕಾಲಿಕವಾಗಿರಬಾರದು. ವಿದ್ಯಾರ್ಥಿಗಳು ನಿಜವಾದ ಗೌರವವನ್ನು ಬೆಳೆಸಿಕೊಳ್ಳಬೇಕು.ಶಿಕ್ಷಕರು ಕೂಡ ಗೌರವದ ವ್ಯಕ್ತಿತ್ವವನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ರಸಾಯನ ಶಾಸ್ತ್ರ ಪ್ರಾಧ್ಯಾಪಕ ಆರ್ ಎನ್ ರೇವಣ್‌ಕರ್ ಹೇಳಿದರು.

Call us

Click Here

ಅವರು ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಅಂಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದರು.

ಶಿಸ್ತುಬದ್ಧತೆ ಎನ್ನುವುದು ಎಲ್ಲರಲ್ಲೂ ಅಗತ್ಯ.ಉತ್ತಮ ಜೀವನಕ್ಕೆ ಗುರುವಿನ ಅಗತ್ಯತೆ ಇದೆ ಎಂದು ಅವರು ಹೇಳಿದರು. ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಎಲ್ಲಾ ಉಪನ್ಯಾಸಕರು ಉಪಸ್ಥಿರಿದ್ದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ನಾರಾಯಣ್ ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಾಗರಾಜ ನಾಯಕ್ ಸ್ವಾಗತಿಸಿದರು. ಅಶ್ಮಿತಾ ಮತ್ತು ಸುಪ್ರೀತ ಪ್ರಾರ್ಥಿಸಿದರು.ಸ್ವಾತಿ ಬಿಲ್ಲವ ಕಾರ‍್ಯಕ್ರಮ ನಿರ್ವಹಿಸಿದರು. ಸಾಯೀ ಪ್ರಸಾದ್ ವಂದಿಸಿದರು.

Leave a Reply