ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಉಡುಪಿ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕುಂದಾಪುರ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಗಂಗೊಳ್ಳಿ ಇವರ ಪ್ರಾಯೋಜಕತ್ವದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಗುರುವಾರ ಜರಗಿದ ಕುಂದಾಪುರ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲಾ ತಂಡ ಪ್ರಶಸ್ತಿ ಗಳಿಸಿದೆ.
ಬಾಲಕಿಯರ ವಿಭಾಗದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲಾ ತಂಡವು ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು ತಂಡವನ್ನು ಸೋಲಿಸಿದರೆ, ಬಾಲಕರ ವಿಭಾಗದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲಾ ತಂಡವು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ತಂಡವನ್ನು ಸೋಲಿಸಿ ಬಹುಮಾನ ಪಡೆದುಕೊಂಡಿದೆ.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಅರುಣಕುಮಾರ್ ಶೆಟ್ಟಿ, ಕುಂದಾಪುರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯ್ಕ್, ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಬಿ.ರಾಘವೇಂದ್ರ ಪೈ, ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ, ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ವಾಮನದಾಸ ಭಟ್, ದೈಹಿಕ ಶಿಕ್ಷಣ ಶಿಕ್ಷಕ ಸದಾನಂದ ವೈದ್ಯ, ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಖಾರ್ವಿ, ಸಹಶಿಕ್ಷಕಿ ಪರಿಮಳ ಮೊದಲಾದವರು ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಸ್ವಾಗತಿಸಿದರು. ಸಹಶಿಕ್ಷಕಿ ಸುಜಾತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.