ಡಾ.ಶಿವರಾಮ ಕಾರಂತ ವಿಷಯಾಧಾರಿತ ರಾಜ್ಯಮಟ್ಟದ ಸಿಮೆಂಟ್ ಶಿಲ್ಪಕಲಾ ಶಿಬಿರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ.ಕೋಟ ಶಿವರಾಮ ಕಾರಂತರ ಕನಸು ನನಸು ಮಾಡುವ ದಾರಿಯಲ್ಲಿರುವ ಕೋಟತಟ್ಟು ಗ್ರಾಮ ಪಂಚಾಯಿತಿ ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲಿ ಇಡೀ ರಾಜ್ಯದಲ್ಲೆ ಮಾದರಿ ಗ್ರಾಮ ಪಂಚಾಯಿತಿಯಾಗಿ ರೂಪುಗೊಂಡಿದೆ. ಕಾರಂತರ ಸಾಹಿತ್ಯ ಥೀಂ ಪಾರ್ಕ ಮೂಲಕ ನಿತ್ಯ ನೂತನವಾಗುತ್ತಿರುವುದು ಸಂತಸದ ವಿಚಾರ ಎಂದು ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.

Call us

Click Here

ಅವರು ಕೋಟ ಥೀಂ ಪಾರ್ಕನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು, ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟ ಡಾ.ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ ಇವರ ಸಹಭಾಗಿತ್ವದಲ್ಲಿ ಆಯೋಜಿಸಲಾದ ಡಾ.ಶಿವರಾಮ ಕಾರಂತ ವಿಷಯಾಧಾರಿತ ರಾಜ್ಯಮಟ್ಟದ ಸಿಮೆಂಟ್ ಶಿಲ್ಪಕಲಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಇದೇ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ೨೫ರಂದು ನಡೆಯಲಿರುವ ಪಂಚಾಯತ್ ಕ್ರೀಡಾ ಕೂಟ ಹೊಳಪು ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು ಇದರ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ವಹಿಸಿದ್ದರು. ಕಾರ್ಯಕ್ರಮ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ರಾಘವೇಂದ್ರ ಕಾಂಚನ್ ಬಾರಿಕೆರೆ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಸದಸ್ಯ ಸಂಚಾಲಕ ಡಾ.ವಿರೂಪಾಕ್ಷ, ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ.ಕುಂದರ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕೋಟತಟ್ಟು ಪಂಚಾಯಿತಿ ಅಧ್ಯಕ್ಷ ಎಚ್. ಪ್ರಮೋದ್ ಹಂದೆ ಸ್ವಾಗತಿಸಿದರು. ಮಾಜಿ ಸಚಿವ ವಿಧಾನ ಪರಿಷತ್ ಸದಸ್ಯ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply