ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತ್ಯಾಗ ಬಲಿದಾನಗಳ ಹಬ್ಬವೆಂದೇ ಪ್ರಸಿದ್ಧಿ ಪಡೆದ ಬಕ್ರೀದ್ ಹಬ್ಬವನ್ನು ಕುಂದಾಪುರ ತಾಲೂಕಿನಾದ್ಯಂತ ಮುಸ್ಲಿಂ ಭಾಂದವರಿಂದ ಸಡಗರದಿಂದ ಆಚರಿಸಲಾಯಿತು. ಶಿರೂರು, ಬೈಂದೂರು, ನಾವುಂದ, ಗಂಗೊಳ್ಳಿ, ಕುಂದಾಪುರ, ಕಂಡ್ಲೂರು, ಗುಲ್ವಾಡಿ ಸೇರಿದಂತೆ ತಾಲೂಕಿನ ಎಲ್ಲಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಯಮ ಮಾಡಿಕೊಂಡರು.