ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಈ ಕಾಲಘಟ್ಟದಲ್ಲಿ ಸರಕಾರ ಕ್ರೀಡೆಗೆ ನೀಡುತ್ತಿರುವ ಬೆಂಬಲ ಬಹಳ ಕಡಿಮೆ. ಆ ನಿಟ್ಟಿನಲ್ಲಿ ಸಾರ್ವಜನಿಕರು, ಸಂಘ ಸಂಸ್ಥೆಗಳು ಮುಖ್ಯವಾಗಿ ಶಿಕ್ಷಣ ಸಂಸ್ಥೆಗಳು ಬೆಂಬಲ ನೀಡಬೇಕು ಎಂದು ಉಪ್ಪುಂದ ಯುವ ಉದ್ಯಮಿ ಬಿ.ಎಸ್ ಸುರೇಶ ಶೆಟ್ಟಿ ಹೇಳಿದರು.
ಕುಂದಾಪುರ ಗಾಂಧಿ ಮೈದಾನದಲ್ಲಿ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.
ಕುಂದಾಪುರ ಎಜುಕೇಶ್ನ್ ಸೊಸೈಟಿ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ, ನಮ್ಮ ನಾಲ್ಕು ಸಂಸ್ಥೆಯಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡೆಗೆ ಪ್ರಾಮುಖ್ಯತೆ ನೀಡುತ್ತಿದು, ವಿದ್ಯಾರ್ಥಿಗಳು ಸಂಸ್ಥೆ ನೀಡುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆ ಎಂದರು.
ಕುಂದಾಪುರ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಚಟುವಟಿಕೆಗಳ ಸಂಚಾಲಕ ನಾಗರಾಜ ಶೆಟ್ಟಿ, ಕುಂದಾಪುರ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಆರ್.ಬಿ ನಾಯಕ್ ಶುಭಾಶಂಸನೆ ಮಾಡಿದರು. ಜಿಲ್ಲಾ ಕ್ರೀಡಾ ಸಂಚಾಲಕ ಶ್ರೀಧರ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಪ್ರಾಂಶುಪಾಲ ನವೀನ ಕುಮಾರ ಶೆಟ್ಟಿ ಸ್ವಾಗತಿಸಿದರು. ಹಿಂದಿ ಉಪನ್ಯಾಸಕಿ ಶ್ರೀಮತಿ ಜಯಶೀಲಾ ಪೈ ಯವರು ಕಾರ್ಯಕ್ರಮ ನಿರ್ವಹಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ ಶೆಟ್ಟಿ ವಂದಿಸಿದರು.