ಜಿಲ್ಲಾ ಮಟ್ಟದ ಟೆನ್ನಿ ಕಾಯ್ಟ್ ಪಂದ್ಯಾಟ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕ್ರೀಡೆಗಳಲ್ಲಿನ ಭಾಗವಹಿಸುವಿಕೆ ಪಠ್ಯ ಕಲಿಯುವಿಕೆಯ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದು ತಪ್ಪು ತಿಳುವಳಿಕೆ. ಬದಲಾಗಿ ಕ್ರೀಡೆ ಎನ್ನುವುದು ನಮ್ಮ ಜ್ಞಾನ ಮತ್ತು ಕಲಿಯುವಿಕೆಯ ಪ್ರಮಾಣವನ್ನು ಹೆಚ್ಚಸಲು ನೆರವಾಗುತ್ತವೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ವಿದ್ಯಾ ಸಂಸ್ಥೆಗಳ ಕಾರ‍್ಯದರ್ಶಿ ಎನ್ ಸದಾಶಿವ ನಾಯಕ್ ಅಭಿಪ್ರಾಯಪಟ್ಟರು.

Call us

Click Here

ಅವರು ಇತ್ತೀಚೆಗೆ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಟೆನ್ನಿಕಾಯ್ಟ್ ಪ೦ದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಕಾಲೇಜಿನ ಪ್ರಾ೦ಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು.ಬಾರಕೂರು ನ್ಯಾಷನಲ್ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು..

ಸರಸ್ವತಿ ವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಸ್ವಾಗತಿಸಿದರು ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ‍್ಯಕ್ರಮ ನಿರೂಪಿಸಿದರು. ರಕ್ಷಿತಾ ಕೊತ್ವಾಲ್ ವಂದಿಸಿದರು.

ವರದಿ ; ನರೇಂದ್ರ ಎಸ್ ಗಂಗೊಳ್ಳಿ.

Click here

Click here

Click here

Click Here

Call us

Call us

Leave a Reply