Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಪದಗ್ರಹಣ
    ಊರ್ಮನೆ ಸಮಾಚಾರ

    ಬೈಂದೂರು ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಪದಗ್ರಹಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸಂಘಟನಾತ್ಮಕ ಕಾರ್ಯದಿಂದ ಪಕ್ಷ ಸದೃಢ: ಶ್ರೀನಿವಾಸ ಪೂಜಾರಿ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಭಾರತೀಯ ಜನತಾ ಪಕ್ಷವನ್ನು ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ತರುವ ಮಹತ್ತರವಾದ ಜವಾಬ್ದಾರಿ ಬಿಜೆಪಿಯ ಕಾರ್ಯಕರ್ತರಿಗಿದ್ದು ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕಿದೆ. ಬಿಜೆಪಿಯ ವಿವಿಧ ಮೋರ್ಚಾಗಳು ಸಂಘಟನಾತ್ಮವಾಗಿ ಕಾರ್ಯನಿರ್ವಹಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

    ಅವರು ನಾಗೂರು ಮಹಾಲಸಾ ಕಲ್ಚರಲ್ ಹಾಲ್‌ನಲ್ಲಿ ನಡೆದ ಬೈಂದೂರು ಕ್ಷೇತ್ರ ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾಗಳ ಪದಗ್ರಹಣ ಸಮಾರಂಭದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಬಡವರು ಹಾಗೂ ದುರ್ಬಲ ವರ್ಗದವರನ್ನು ಮರೆತಿದೆ. ಕುಂದಾಪುರ ತಾಲೂಕಿನಲ್ಲಿ 2,000ಕ್ಕೂ ಹೆಚ್ಚು ಮಂದಿ ಹಕ್ಕುಪತ್ರಕ್ಕಾಗಿ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಸರಣಿ ರೈತರ ಆತ್ಮಹತ್ಯೆಗಳು ನಡೆದಿವೆ. ಕಾವೇರಿ ನೀರಿನ ವಿಷಯದಲ್ಲಿಯೂ ರಾಜಕೀಯ ಮಾಡಿದೆ ಎಂದ ಅವರು ಜನಪರ ಕಾಳಜಿಯ ಕಾರ್ಯಗಳಬೇಕಾದರೆ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕಿದೆ ಎಂದರು.

    ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಂ. ಸುಕುಮಾರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿ ಬೂತ್ ಮಟ್ಟದಲ್ಲಿಯೂ ಬಿಜೆಪಿಯ ಕಾರ್ಯಕರ್ತರು ಸಂಘಟಿತ ಹೋರಾಟ ನಡೆಸಬೇಕಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುವಂತೆ ಕಾಯೋನ್ಮಕವಾಗಬೇಕಿದೆ ಎಂದ ಅವರು ಬೈಂದೂರು ಬಿಜೆಪಿ ಯುವ ಮೋರ್ಚಾ ಹಾಗೂ ಮಹಿಳಾ ಮೋರ್ಚಾ ಅಧ್ಯಕ್ಷರುಗಳು ಆರಂಭದಿಂದಲೇ ಹುರುಪಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಇದು ಎಲ್ಲರನ್ನೂ ಒಗ್ಗೂಡಿಸಿಕೊಂಡು ಪಕ್ಷದ ಯಶಸ್ಸಿಗೆ ಕಾರಣವಾಗಲಿ ಎಂದರು.

    ಬಿಜೆಪಿ ಯುವಮೋರ್ಚಾದ ನೂತನ ಅಧ್ಯಕ್ಷ ಶರತಕುಮಾರ್ ಶೆಟ್ಟಿ ಅವರಿಗೆ ನಿಕಟಪೂರ್ವಾಧ್ಯಕ್ಷ ರಾಘವೇಂದ್ರ ನೆಂಪು ಅಧಿಕಾರ ಹಸ್ತಾಂತರಿಸಿದರು. ಬಿಜೆಪಿ ಮಹಿಳಾ ಮೋರ್ಚಾದ ನೂತನ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು ಅವರಿಗೆ ನಿಕಟಪೂರ್ವಾಧ್ಯಕ್ಷೆ ನಯನಾ ಶ್ಯಾನುಭೋಗ್ ಅಧಿಕಾರ ಹಸ್ತಾಂತರಿಸಿದರು. ಶಕ್ತಿಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ, ಜಿಪಂ ಸದಸ್ಯರುಗಳಾದ ಶಂಕರ ಪೂಜಾರಿ, ಸುರೇಶ್ ಬಟ್ವಾಡಿ, ಬಾಬು ಹೆಗ್ಡೆ, ಗೀತಾಂಜಲಿ ಸುವರ್ಣ, ಬಿಜೆಪಿ ಬೈಂದೂರು ಯುವ ಮೋರ್ಚಾದ ಪ್ರಬಾರಿ ಸುರೇಶ್ ಶೆಟ್ಟಿ, ಯುವ ಮೊರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ್ ಪೂಜಾರಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ನಯನಾ ಗಣೇಶ್, ಪ್ರಧಾನ ಕಾರ್ಯದರ್ಶಿ ವೀಣಾ, ಬೈಂದೂರು ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಕಾರ್ಯದರ್ಶಿ ದೀಪಕ್‌ಕುಮಾರ್ ಶೆಟ್ಟಿ, ಬೈಂದೂರು ಮಹಿಳಾ ಮೋರ್ಚಾದ ಕಾರ್ಯದರ್ಶಿ ಸಂಧ್ಯಾ ಭಾಸ್ಕರ್ ಪುತ್ರನ್, ಯುವ ಮೋರ್ಚಾದ ಕಾರ್ಯದರ್ಶಿ ಹರೀಶ್ ತೋಳಾರ್, ಬಿಜೆಪಿ ಮುಂದಾಳುಗಳಾದ ವೀರಭದ್ರ ಶೆಟ್ಟಿ ಮುಂತಾದವರು ವೇದಿಕೆಯಲ್ಲಿದ್ದರು.

    ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶರತ್  ಶೆಟ್ಟಿ ಉಪ್ಪುಂದ ಪ್ರಸ್ತಾವಿಕ ಮಾತುಗಳನ್ನಡಿದರು. ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು ಸ್ವಾಗತಿಸಿದರು. ಉಪನ್ಯಾಸಕ ದಿವ್ಯಾಧರ ಶೆಟ್ಟಿ ಕೆರಾಡಿ ನಿರೂಪಿಸಿದರು.

    _mg_1447 _mg_1449 _mg_1453 _mg_1459 _mg_1462_mg_1463 _mg_1464 _mg_1465 _mg_1467 _mg_1475 _mg_1486_mg_1488 _mg_1490 _mg_1491 _mg_1493 _mg_1494

    Like this:

    Like Loading...

    Related

    BJP BJP Yuva morcha Byndoor Sharath Shetty Uppunda
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d