ಕುಂದಾಪುರ: ಸ್ಯಾಕ್ಸೋಫೋನ್ ವಾದನದಲ್ಲಿ ಅಪ್ರತಿಮ ಪ್ರೌಢಿಮೆ ತೋರಿಸಿ ಅನೇಕ ಪ್ರಶಸ್ತಿ ಪುರಸ್ಕಾರಗಳನ್ನು ಪಡೆದ ಪ್ರತಿಭಾವಂತ ಸ್ಯಾಕ್ಸೋಪೋನ್ ವಾದಕಿ ಸಾಲಿಗ್ರಾಮದ ಮೇಘನಾ ಅವರಿಗೆ ‘ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ – 2013’ನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ದೆಹಲಿ ದೂರದರ್ಶನ ಕೇಂದ್ರದ ಹೆಚ್ಚುವರಿ ಮಹಾ ನಿರ್ದೇಶಕ ನಾಡೋಜ ಡಾ| ಮಹೇಶ್ ಜೋಶಿ ಪ್ರಶಸ್ತಿ ಪ್ರಧಾನ ಮಾಡಿದರು.
ಸುಪ್ರಿಂಕೋರ್ಟನ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಡಾ. ಶಿವರಾಜ್ ವಿ. ಪಾಟೀಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಧಾನ ಪರಿಷತ್ ಸಭಾಪತಿ ಡಿ. ಎಚ್. ಶಂಕರಮೂರ್ತಿ, ಕನ್ನಡಪ್ರಭ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್, ಆರ್ಯಭಟ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ| ಎಚ್.ಎಲ್.ಎನ್. ರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮೇಘನಾ ಸಾಲಿಗ್ರಾಮ ಸ್ಯಾಕ್ಸೋಫೋನ್ ವಾದಕ ಅಲೆವೂರು ಸುಂದರ ಶೇರೇಗಾರ ಅವರ ಶಿಷ್ಯೆಯಾಗಿದ್ದು, ದೇಶ ವಿದೇಶಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದಾರೆ.