ದಾರಿಮಕ್ಕಿ ನಾರಾಯಣ ಮಯ್ಯ ಹಾಗೂ ತೆಕ್ಕೆಟ್ಟೆ ಆನಂದ ಮಾಸ್ತರ್‌ಗೆ ಕಲಾತಪಸ್ವಿ ಪ್ರಶಸ್ತಿ ಪ್ರದಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಯಕ್ಷಗಾನ ಕಲೆ ಕರ್ನಾಟಕದ ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿದ್ದರೂ ಕೂಡಾ ಕರಾವಳಿ ಭಾಗದ ಪ್ರತಿಭಾವಂತ ಮತ್ತು ಅನುಭವಿ ವೃತ್ತಿ ಕಲಾವಿದರು ಯಕ್ಷಗಾನ ಸಂಘಟನೆ ಹಾಗೂ ಪ್ರಸಾರದಲ್ಲಿ ತೊಡಗಿರುವುದು ಆಶಾದಾಯಕ ಬೆಳವಣಿಗೆ ಎಂದು ರಾಜ್ಯ ಮೀನುಗಾರಿಕಾ, ಯುವಜನ ಸೇವಾ, ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

Call us

Click Here

ಕಿರಿಮಂಜೇಶ್ವರ ನಾಗೂರು ಸುತ್ತಲಿನ ನಾಗರಿಕರ ಮತ್ತು ರಾಜ್ಯ ಯಕ್ಷಗಾನ ಬಯಲಾಟ ಅಕಾಡೆಮಿಯ ಸಹಯೋಗದೊಂದಿಗೆ ಧಾರೇಶ್ವರ ಯಕ್ಷ ಬಳಗ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ನಾಗೂರಿನ ಒಡೆಯರಮಠ ಗೋಪಾಲಕೃಷ್ಣ ಕಲಾಮಂದಿರದ ಯಕ್ಷಗುರು ಹೇರಂಜಾಲು ವೆಂಕಟರಮಣ ಗಾಣಿಗ ವೇದಿಕೆಯಲ್ಲಿ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.

ಯಕ್ಷಗಾನಕ್ಕಾಗಿ ಕೆಲವರು ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಅಂತವರನ್ನು ಗುರುತಿಸಿ ಗೌರವಿಸುವ ಕಾರ್ಯ ನಿರಂತರವಾಗಬೇಕು. ಅಲ್ಲದೇ ಇಂತಹ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಈ ಹಿಂದೆ ಯಕ್ಷಗಾನದಲ್ಲಿ ಸಾಧನೆ ಮಾಡಿ ನಮ್ಮನ್ನಗಲಿದ ಹೆಸರಾಂತ ಕಲಾವಿದರನ್ನು ಯಕ್ಷವೇದಿಕೆಯಲ್ಲಿ ಸ್ಮರಿಸಿಕೊಳ್ಳುವುದರಿಂದ ಕಲಾಜೀವನದ ಸಾರ್ಥಕತೆ ಕಾಣಬಹುದಾಗಿದೆ ಎಂದರು.

ಯಕ್ಷ ಶಿಕ್ಷಕ ದಾರಿಮಕ್ಕಿ ನಾರಾಯಣ ಮಯ್ಯರಿಗೆ ತೆಕ್ಕೆಟ್ಟೆ ಆನಂದ ಮಾಸ್ತರ್ ಕಲಾತಪಸ್ವಿ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಇವರು ಹೇರಂಜಾಲು ದಿವಂಗತ ವೆಂಕಟರಮಣ ಗಾಣಿಗರ ಸಂಸ್ಕರಣೆ ಮಾಡಿದರು. ಈ ಸಂದರ್ಭ ಇವರ ಪುತ್ರ ಭಾಗವತ ಹೇರಂಜಾಲು ಗೋಪಾಲ ಗಾಣಿಗ ದಂಪತಿಗಳಗೆ ಸಚಿವರು ಸನ್ಮಾನಿಸಿದರು.

ಶಾಸಕ ಕೆ. ಗೋಪಾಲ ಪೂಜಾರಿ, ಖಂಬದಕೋಣೆ ಸಂದೀಪನ್ ಆಂಗ್ಲಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯ ಬಿಜೂರು ವಿಶ್ವೇಶ್ವರ ಅಡಿಗ, ದಿ. ತೆಕ್ಕೆಟ್ಟೆ ಅನಂದ ಮಾಸ್ತರ್ ಧರ್ಮಪತ್ನಿ ಸುನಂದಾ ಶೆಣೈ ಉಪಸ್ಥಿತರಿದ್ದರು. ಗೋವಿಂದ ಮಟ್ನಕಟ್ಟೆ ಸ್ವಾಗತಿಸಿ, ಭಾಗವತ ಸುಬ್ರಹ್ಮಣ್ಯ ಧಾರೇಶ್ವರ್ ವಂದಿಸಿದರು. ರತನ್ ಬಿಜೂರು ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply