ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇಲ್ಲಿ ಇಂಗ್ಲಿಷ್ ವಿಭಾಗದ ಉದ್ಘಾಟನೆ ಹಾಗೂ ಆಧುನಿಕ ಯುಗದಲ್ಲಿ ಇಂಗ್ಲಿಷ್ ಮಹತ್ವ ಎನ್ನುವ ವಿಷಯದ ಬಗ್ಗೆ ಉಪನ್ಯಾಸ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ರಘರಾಮ ನಾಯಕ್ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ವಿಭಾಗದ ಮುಖ್ಯಸ್ಥ ಅನಿಲ ಕುಮಾರ್ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಉಮೇಶ ಮಯ್ಯ ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಸಂಚಾಲಕಿ ಅಮಿತಾ ಇವರು ಪ್ರಾಸ್ತಾವಿಕ ಮಾತನ್ನಾಡಿದರು, ಪ್ರೇಮಲತಾ ಕಾರ್ಯಕ್ರಮ ನಿರೂಪಿಸಿದರು.










