ಡಾ. ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿದ್ಯಾದಾನದಷ್ಟೇ ರಕ್ತದಾನ ಶ್ರೇಷ್ಠವಾದುದು. ಜಾತಿ, ಮತ ಬೇಧವಿಲ್ಲದೆ ರಕ್ತದಾನದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಕರಾವಳಿ ಪರಿಸರದಲ್ಲಿ ರಕ್ತದಾನಕ್ಕೆ ಹೊಸ ಆಯಾಮ ನೀಡುತ್ತಿರುವ ಹಾಗೂ ಆರೋಗ್ಯಕ್ಕೆ ಮತ್ತು ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ನಾಡೋಜ ಡಾ. ಜಿ. ಶಂಕರ್‌ರವರ ಪ್ರಯತ್ನ ಉಲ್ಲೇಖನೀಯ. ಉಡುಪಿ ಜಿಲ್ಲೆ ರಕ್ತದಾನಿಗಳ ಜಿಲ್ಲೆಯಾಗಿ ಗುರುತಿಸಿಕೊಂಡಿರುವುದು ಶ್ಲಾಘನೀಯ ಎಂದು ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಶ್ರೀ ಬಿ. ಎಮ್. ಸುಕುಮಾರ್ ಶೆಟ್ಟಿ ಹೇಳಿದರು.

Call us

Click Here

ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಮೊಗವೀರ ಯುವ ಸಂಘಟನೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಜಿಲ್ಲಾ ಆಡಳಿತ ಉಡುಪಿ, ಕೆ.ಎಂ.ಸಿ. ಆಸ್ಪತ್ರೆ ರಕ್ತನಿಧಿ ಮಣಿಪಾಲ ಸಹಯೋಗದಲ್ಲಿ ಬುಧವಾರ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಕಾಲೇಜ್ ಪ್ರಾಂಶುಪಾಲ ಪ್ರೊ. ದೋಮ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಗಣೇಶ್ ಕಾಂಚನ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಸದಾನಂದ ಬಳ್ಕೂರು, ಮೊಗವೀರ ಯುವ ಸಂಘಟನೆ ಕುಂದಾಪುರ ಅಧ್ಯಕ್ಷ ಕೆ. ಆರ್. ರಮೇಶ್ ಟಿ .ಟಿ., ಕೆ.ಎಂ.ಸಿ. ಮಣಿಪಾಲದ ವೈದ್ಯೆ ಡಾ. ದೀಪಿಕಾ ಉಪಸ್ಥಿತರಿದ್ದರು.

ವಾಣಿಜ್ಯ ಉಪನ್ಯಾಸಕ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು, ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ನಿರೂಪಿಸಿದರು.

Leave a Reply