ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆಯ ಸಬ್ಸಿಡಿ: ಸರಕಾರಕ್ಕೆ ಅಭಿನಂದನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ನಾಡದೋಣಿ ಮೀನುಗಾರರಿಗೆ ಸೀಮೆಎಣ್ಣೆಯ ಸಬ್ಸಿಡಿಯನ್ನು ಬಿಡುಗಡೆಗೊಳಿಸಿದ ರಾಜ್ಯ ಸರಕಾರಕ್ಕೆ ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರ ಒಕ್ಕೂಟ ಅಭಿನಂದನೆ ಸಲ್ಲಿಸಿದ್ದಾರೆ.

Call us

Click Here

ಮೀನುಗಾರರಿಗೆ ಸೀಮೆಎಣ್ಣೆ ಸಬ್ಸಿಡಿ ಬಿಡುಗಡೆಗೊಳಿಸಲು ಸಹಕರಿಸಿದ ರಾಜ್ಯದ ಮೀನುಗಾರಿಕಾ ಸಚಿವ ಪ್ರಮೋದ ಮಧ್ವರಾಜ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಯು.ಟಿ.ಖಾದರ್, ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಅವರನ್ನು ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ, ಉಪ್ಪುಂದ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕೆ.ಸೋಮಶೇಖರ ಖಾರ್ವಿ, ಶಿರೂರು ವಲಯ ಅಲ್ಪಸಂಖ್ಯಾತ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಕಬ್ಸಿ ಮಹಮ್ಮದ್, ಶಿರೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ನಾಗಪ್ಪ ಮೊಗವೀರ ಹಾಗೂ ನಾಡದೋಣಿ ಮೀನುಗಾರರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply