ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಆಶ್ರಯದಲ್ಲಿ ಕೋಟೇಶ್ವರ ನಮ್ಮ ಕಲಾಕೇಂದ್ರದ ಸಹಭಾಗಿತ್ವದಲ್ಲಿ ನಡೆದ ತಿಂಗಳ ಕಾರ್ಯಕ್ರಮದಲ್ಲಿ ಕುಂದಾಪುರದ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ಕೆ. ರವಿರಾಜ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮಾಜಿ ಧರ್ಮದರ್ಶಿ ಗೋಪಾಲಕೃಷ್ಣ ಶೆಟ್ಟಿ ಮಾರ್ಕೋಡು, ಹಿರಿಯ ಗೊಂಬೆಯಾಟ ಕಲಾವಿದ ವಾಮನ ಪೈ ಹೆಮ್ಮಾಡಿ, ಸಂತೋಷ್ ಅಡ್ವರ್‌ಟೈಸಿಂಗ್ ಮಾಲಕ ಸಂತೋಷ ಕೋಣಿ ಉಪಸ್ಥಿತರಿದ್ದರು.
ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ ಕೊಗ್ಗ ಕಾಮತ್ ಪ್ರಾಸ್ತಾವಿಕ ಮಾತನಾಡಿದರು. ಬಟ್ವಡಿ ಅನುದಾನಿತ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ನಾಗೇಶ್ ಶ್ಯಾನುಭಾಗ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ನಮ್ಮ ಕಲಾಕೇಂದ್ರದ ಕಲಾವಿದರಿಂದ ಭೀಷ್ಮ ಪ್ರತಿಜ್ಞೆ ತಾಳಮದ್ದಳೆ ನಡೆಯಿತು.