ಮರವಂತೆ: ಕಾರು ಉರುಳಿ ಹುಟ್ಟುಹಬ್ಬ ಆಚರಿಸಬೇಕಿದ್ದ ಮಗು ಗಂಭೀರ, ನಾಲ್ವರಿಗೆ ಗಾಯ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹೊನ್ನಾವರದಿಂದ ಮಂಗಳೂರು ತೆರಳುತ್ತಿದ್ದ ರಿಡ್ಜ್ ಕಾರು ನಿಯಂತ್ರಣ ತಪ್ಪಿ ಮರವಂತೆ ರಾಷ್ಟ್ರೀಯ ಹೆದ್ದಾರಿ 66 ಬಳಿ ನಿಂತಿದ್ದ ವಾಹನಕ್ಕೆ ಡಿಕ್ಕಿಯಾಗಿ ಚರಂಡಿಗೆ ಉರುಳಿ ಬಿದ್ದ ಘಟನೆ ಮಂಗಳವಾರ ಮಧ್ಯಾಹ್ನ ವರದಿಯಾಗಿದೆ.

Call us

Click Here

ಕಾರಿನಲ್ಲಿದ್ದ ಕಿಯೋನಾ ಪಿಂಟೊ (8) ಗಂಭೀರ ಗಾಯಗೊಂಡಿದ್ದರೇ, ಕಾರು ಚಲಾಯಿಸುತ್ತಿದ್ದ ಸನ್ನಿ ಲೆಸಾರ‍್ಡೋ(32), ಅವರ ತಾಯಿ ಸಿಸಿಲಿಯಾ ಲೆಸಾರ‍್ಡೋ(56), ಅಕ್ಕ ಜಾಸ್ಮಿನ್ ಪಿಂಟೋ(36) ಹಾಗೂ ಆಕೆಯ ಮಗು ಕೇಲ್ ಪಿಂಟೋ(4) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ನ.1ರಂದು ಹುಟ್ಟಹಬ್ಬ ಆಚರಿಸಿಕೊಳ್ಳಬೇಕಿದ್ದ ಬಾಲಕಿ ಕಿಯೋನಾ  ಆಸ್ಪತ್ರೆಯಲ್ಲಿ ಗಂಭೀರ ಗಾಯಗೊಂಡು ಮಲಗಿದ್ದಾಳೆ.ಕುಂದಾಪ್ರ ಡಾಟ್ ಕಾಂ.

ಮಂಗಳೂರು ನಂದಿಗುಡ್ಡ ನಿವಾಸಿಯಾಗಿರುವ ಸನ್ನಿ ಲೆಸಾರ‍್ಡೋ ಕುವೈತ್‌ನಲ್ಲಿ ಉದ್ಯೋಗಿಯಾಗಿದ್ದು, ಊರಿಗೆ ಬಂದಿದ್ದಾಗ ಕುಟುಂಬಿಕರೊಂದಿಗೆ ಹೊನ್ನಾವರದ ಸಂಬಂಧಿಕರ ಮನೆಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಮರವಂತೆಯ ಮಾರಸ್ವಾಮಿ ದೇವಸ್ಥಾನದ ಸಮೀಪ ವೇಗವಾಗಿ ಬರುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆಯ ಬದಿಯಲ್ಲಿ ನಿಲ್ಲಿಸಲಾಗಿದ್ದ ವಾಹನಕ್ಕೆ ಢಿಕ್ಕಿ ಹೊಡಿದು ಮೂರು ಸುತ್ತು ಉರುಳಿ ಚರಂಡಿಗೆ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡ ಗಾಯಾಳುವನ್ನು ಮಣಿಪಾಲದ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಉಳಿದವರು ಕುಂದಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಂದಾಪುರ ಡಿವೈಎಸ್ಪಿ ಪ್ರವೀಣ ನಾಯಕ್, ಗಂಗೊಳ್ಳಿ ಠಾಣಾಧಿಕಾರಿ ಸುಬ್ಬಣ್ಣ ಹಾಗೂ ಸಿಬ್ಬಂಧಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. © ಕುಂದಾಪ್ರ ಡಾಟ್ ಕಾಂ

Ritz Car topples at Maravanthe child serious, four injured

Leave a Reply