ಗಂಗೊಳ್ಳಿ: ವಿದ್ಯುತ್ ವಿತರಣಾ ಕೇಂದ್ರ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರ ಹಲವು ವರ್ಷಗಳ ಬೇಡಿಕೆಯಾಗಿದ್ದ ಗಂಗೊಳ್ಳಿ ಉಪ ವಿದ್ಯುತ್ ಕೇಂದ್ರಕ್ಕೆ ಆರಂಭಕ್ಕೆ ಕೆಲವೊಂದು ಸಮಸ್ಯೆಗಳು ಎದುರಾಗಿದ್ದು, ಅದನ್ನು ಸರಿಪಡಿಸಿ ವಿದ್ಯುತ್ ಕೇಂದ್ರದ ಕಾರ್ಯಾಚರಣೆಗೆ ಆರಂಭಿಸಲಾಗಿದೆ. ಅತಿ ಹೆಚ್ಚು ಆದಾಯ ಬರುತ್ತಿರುವ ಗಂಗೊಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ಅಡಚಣೆಯುಂಟಾಗದೆ ಉತ್ತಮ ರೀತಿಯಲ್ಲಿ ವಿದ್ಯುತ್ ವಿತರಣೆ ಮಾಡಬೇಕು ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.

Call us

Click Here

ಅವರು ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೇಲ್‌ಗಂಗೊಳ್ಳಿ ಬಳಿ ನಿರ್ಮಾಣಗೊಂಡಿರುವ ಗಂಗೊಳ್ಳಿ ೩೩/೧೧ ಕೆ.ವಿ. ವಿದ್ಯುತ್ ವಿತರಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿ ವಿದ್ಯುತ್ ವಿತರಣಾ ಕೇಂದ್ರ ಕಾರ್ಯಾರಂಭ ಮಾಡಲು ಬಹಳಷ್ಟು ಪ್ರಯತ್ನಗಳು ನಡೆದಿದೆ. ಎಲ್ಲರ ಪ್ರಯತ್ನದ ಫಲವಾಗಿ ಗಂಗೊಳ್ಳಿ ವಿದ್ಯುತ್ ವಿತರಣಾ ಕೇಂದ್ರ ಜನರ ಸೇವೆಗೆ ಲಭ್ಯವಾಗಿದ್ದು, ಅಧಿಕಾರಿಗಳು ಈ ಕೇಂದ್ರವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ತಾಲೂಕು ಪಂಚಾಯತ್ ಸದಸ್ಯರಾದ ಸುರೇಂದ್ರ ಖಾರ್ವಿ ಗಂಗೊಳ್ಳಿ, ನಾರಾಯಣ ಕೆ. ಗುಜ್ಜಾಡಿ, ರಾಜು ದೇವಾಡಿಗ, ಕರಣ್ ಪೂಜಾರಿ ತಲ್ಲೂರು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಶ ಮೇಸ್ತ, ವೆಂಕಟ ಪೂಜಾರಿ, ಚಂದ್ರಶೇಖರ ಪೂಜಾರಿ, ನರಸಿಂಹ ದೇವಾಡಿಗ, ಗಂಗೊಳ್ಳಿ ಗ್ರಾಪಂ ಆಡಳಿತಾಧಿಕಾರಿ ಸೀತಾರಾಮ ಶೆಟ್ಟಿ, ಮೆಸ್ಕಾಂನ ನಿರ್ದೇಶಕರಾದ ರಿಯಾಜ್ ಅಹಮ್ಮದ್, ಸಂಪಿಗೇಡಿ ಸಂಜೀವ ಶೆಟ್ಟಿ, ಕುಂದಾಪುರ ವಿಭಾಗದ ಎಕ್ಸಿಕ್ಯೂಟಿವ್ ಇಂಜಿನಿಯರ್ ಪುಟ್ಟಸ್ವಾಮಿ, ಆರ್.ಟಿ. ಕಾರ್ಯನಿರ್ವಾಹಕ ಇಂಜಿನಿಯರ್ ಶಾಂತಕುಮಾರ್, ಬೈಂದೂರು ಉಪವಿಭಾಗದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಯಶವಂತ್, ತಲ್ಲೂರು ಶಾಖೆಯ ಜ್ಯೂನಿಯರ್ ಇಂಜಿನಿಯರ್ ರಾಜೇಶ್, ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಹಾದೇವಪ್ಪ, ಉದ್ಯಮಿಗಳಾದ ಎಚ್.ಗಣೇಶ ಕಾಮತ್, ಎಂ.ಎಂ.ಸುವರ್ಣ, ರಾಜೇಂದ್ರ ಸುವರ್ಣ, ಗುತ್ತಿಗೆದಾರ ಗಣಪಯ್ಯ ಶೆಟ್ಟಿ, ವಿವಿಧ ಗ್ರಾಮ ಪಂಚಾಯತ್‌ಗಳ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು. ತಲ್ಲೂರು ಉಪವಿಭಾಗದ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ವಿನಾಯಕ ಕಾಮತ್ ಸ್ವಾಗತಿಸಿದರು. ಗಂಗೊಳ್ಳಿ ಶಾಖೆಯ ಜ್ಯೂನಿಯರ್ ಇಂಜಿನಿಯರ್ ರಾಘವೇಂದ್ರ ವಂದಿಸಿದರು.

Leave a Reply