Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್ ನುಡಿಸಿರಿಯಲ್ಲಿ ಚಿತ್ರಕಲಾ ಮೇಳ, ಪ್ರದರ್ಶನ
    alvas nudisiri

    ಆಳ್ವಾಸ್ ನುಡಿಸಿರಿಯಲ್ಲಿ ಚಿತ್ರಕಲಾ ಮೇಳ, ಪ್ರದರ್ಶನ

    Updated:15/11/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಚಿತ್ರಕಲೆಯ ಕುರಿತು ಜನಜಾಗೃತಿಗಾಗಿ ವ್ಯವಸ್ಥಿತ ರೀತಿಯಲ್ಲಿ ಚಿತ್ರಸಂತೆಯನ್ನು ಆಯೋಜಿಸಿದ್ದು, ನಾಡಿನ ಚಿತ್ರಕಲಾವಿದರಿಗೆ ಭಾಗವಹಿಸಲು ಅವಕಾಶವನ್ನು ಕಲ್ಪಿಸಿದೆ. ನವಂಬರ್ 18ರಿಂದ 20ರವರೆಗೆ ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿರಿಯ ಸಂದರ್ಭದಲ್ಲಿ ಏರ್ಪಡಿಸಲಾಗಿರುವ ಈ ಚಿತ್ರಕಲಾ ಮೇಳವು ನೋಡುಗರನ್ನು ಆಕರ್ಷಿಸಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ತಿಳಿಸಿದರು.

    Click Here

    Call us

    Click Here

    ರಾಜ್ಯದ ವಿವಿಧ ಜಿಲ್ಲೆಗಳ ಚಿತ್ರಕಲಾವಿದರು ತಮ್ಮ ಕಲಾಕೃತಿಗಳ ಪ್ರದರ್ಶನದ ಜೊತೆಗೆ ಸ್ಥಳದಲ್ಲೇ ಮಾರಾಟವನ್ನೂ ಮಾಡಬಹುದು. ಕಲಾ ಶಾಲೆಗಳ ವಿದ್ಯಾರ್ಥಿಗಳೂ ತಮ್ಮ ಶಾಲಾ ಮುಖ್ಯಸ್ಥರ ಅನುಮತಿ ಪತ್ರದೊಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಒಬ್ಬರು ಗರಿಷ್ಟ ಎರಡು ಮಳಿಗೆಗಳನ್ನು ಪಡೆಯಲು ಅವಕಾಶವಿದೆ. ಕಲಾಕೃತಿಗಳ ಪ್ರದರ್ಶನಕ್ಕಾಗಿ 7 ಅಡಿ ಎತ್ತರ ಹಾಗೂ 10 ಅಡಿ ಅಗಲ ವಿಸ್ತಾರದ ಸಮತಳ ಮಳಿಗೆಗಳನ್ನು ನೀಡಲಾಗುವುದು. ಉಳಿದಂತೆ ಪ್ರದರ್ಶನಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಚಿತ್ರಕಲಾವಿದರೇ ತರಬೇಕಾಗುತ್ತದೆ. 18-11-2016ರ ಬೆಳಿಗ್ಗೆ 9ಗಂಟೆಯೊಳಗೆ ಮಳಿಗೆಗಳಲ್ಲಿ ತಮ್ಮ ಕಲಾಕೃತಿಗಳ ಪ್ರದರ್ಶನ ಸಂಪೂರ್ಣಗೊಳಿಸಿರಬೇಕು.

    ಕಲಾವಿದರು ತಮ್ಮ ಮಳಿಗೆಗಳಲ್ಲಿ ಚಿತ್ರಕಲೆಯ ಕುರಿತು ಪ್ರಾತ್ಯಕ್ಷಿಕೆ ನೀಡಬಹುದು. ಭಾಗವಹಿಸುವ ಪ್ರತೀ ಚಿತ್ರಕಲಾವಿದರಿಗೂ ಉಚಿತ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ ಕಲಾವಿದರಿಗೆ ಅಭಿನಂದನಾ ಪತ್ರವನ್ನೂ ನೀಡಲಾಗುವುದು. ಆಸಕ್ತರು ನವಂಬರ್ 15ರೊಳಗೆ ತಮ್ಮ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ಬೇಕಾದ ಮಳಿಗೆ ವಿವರ, ಇತ್ಯಾದಿ ವಿವರಗಳೊಂದಿಗೆ ಅರ್ಜಿಗಳನ್ನು ‘ಅಧ್ಯಕ್ಷರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡಬಿದಿರೆ-574227 ದ.ಕ’ ಈ ವಿಳಾಸಕ್ಕೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಕಲಾವಿದರಿಗೆ ಮಳಿಗೆ ಸಂಖ್ಯೆ ನೀಡಲಾಗುವುದು.

    ಆನ್ಲೈನ್ ಅರ್ಜಿಗಳಿಗೆ www.alvasnudisiri.com <http://www.alvasnudisiri.com/>ಗೆ ಭೇಟಿ ಕೊಡಿ. ಹೆಚ್ಚಿನ ವಿವರಗಳಿಗೆ ಭಾಸ್ಕರ್ ನೆಲ್ಯಾಡಿ 9901114843 ಇವರನ್ನು ಸಂಪರ್ಕಿಸಲು ಕೋರಲಾಗಿದೆ.

    Share. Facebook Twitter Pinterest LinkedIn Tumblr Telegram Email
    Kundapra.com

    Related Posts

    70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್

    04/02/2026

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026

    ಆಳ್ವಾಸ್‌ನ ಎನ್‌ಸಿಸಿ ಸಾಧಕರಿಗೆ ಸನ್ಮಾನ

    02/02/2026
    Leave A Reply Cancel Reply

    8 − three =

    Call us

    Click Here

    Call us

    Call us

    Call us
    Highest Viewed Recently
    • ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.