ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಐ. ವಸಂತಕುಮಾರಿ (೭೧) ಅಲ್ಪಕಾಲದ ಅಸ್ವಾಸ್ಥ್ಯದ ಕಾರಣ ಗುರುವಾರ ಬೆಂಗಳೂರಿನ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು. ಕನ್ನಡ ಪಂಡಿತ ಐರೋಡಿ ಯಜ್ಞನಾರಾಯಣ ಉಡುಪ-ಸಾಂಪ್ರದಾಯಿಕ ಹಾಡುಗಳ ಗಾಯಕಿ ರುಕ್ಮಿಣಿ ಉಡುಪ ದಂಪತಿಯ ಪುತ್ರಿ ಆಗಿರುವ ಅವರು ಬಸ್ರೂರು, ಕುಂದಾಪುರ, ಕೋಟೇಶ್ವರ, ಬೈಂದೂರು ಮತ್ತು ನಾವುಂದ ಪ್ರೌಢಶಾಲೆಗಳಲ್ಲಿ ವಿಜ್ಞಾನ ಶಿಕ್ಷಕಿಯಾಗಿ ದುಡಿದಿದ್ದರು. ಮುಖ್ಯೋಪಾಧ್ಯಾಯಿನಿ ಹುದ್ದೆಗೆ ಬಡ್ತಿಗೊಂಡ ಬಳಿಕ ಮರವಂತೆ ಸರಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು. ವಿಜ್ಞಾನ ವಿಷಯದ ಪರಿಣಾಮಕಾರಿ ಬೋಧನೆ ಮತ್ತು ಶಾಲಾಭಿವೃದ್ಧಿಯ ಮೂಲಕ ಗುರುತಿಸಲ್ಪಟ್ಟಿದ್ದ ಅವರಿಗೆ ೨೦೦೨-೦೩ನೆ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿತ್ತು.
ಅವರು ಪತಿ ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ, ಬೈಂದೂರಿನ ತೆರಿಗೆ ಸಲಹೆಗಾರ ಜತೀಂದ್ರ ಮತ್ತು ಬ್ರಿಸ್ಟಲ್‌ನ ಏರ್‌ಬಸ್ ವಿಮಾನ ತಯಾರಿ ಸಂಸ್ಥೆಯ ಹಿರಿಯ ತಂತ್ರಜ್ಞ ಯೋಗಿಂದ್ರ ಸೇರಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.










