ಬೈಂದೂರು: ಸಂಕದಬಾಗಿಲು ಸೇತುವೆ ಇತರೆ ಕಾಮಗಾರಿಗೆ ಗುದ್ದಲಿ ಪೂಜೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರಕಾರ ಹೆಚ್ಚಿನ ಅನುದಾನ ನೀಡುತ್ತಿದೆ. ಈಗಾಗಲೇ ಬಿಡುಗಡೆಗೊಂಡಿರುವ ಅನುದಾನವನ್ನು ಕ್ಷೇತ್ರದ ವಿವಿಧ ಪ್ರದೇಶಗಳ ಅಭಿವೃದ್ಧಿಗೆ ಸಮಪರ್ಕವಾಗಿ ಬಳಸಿಕೊಳ್ಳಲಾಗುತ್ತಿದ್ದು, ಕಾಮಗಾರಿಯಲ್ಲಿ ಯಾವುದೇ ಲೋಪದೋಷವಾಗದಂತೆ ಎಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್‌ಗಳಿಗೆ ತಿಳಿಸಲಾಗಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

Call us

Click Here

ಯಡ್ತರೆ ಗ್ರಾಪಂ ವ್ಯಾಪ್ತಿಯ ಸಂಕದಬಾಗಿಲು ಬಳಿ ಹಳೇ ಎಂ.ಬಿ.ಸಿ ರಸ್ತೆಯಲ್ಲಿ ನಬಾರ್ಡ್‌ನ ಸಹಕಾರದಲ್ಲಿ ಪಿಡಬ್ಲ್ಯೂಡಿ ಇಲಾಖೆಯಿಂದ ರೂ.೯೦ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ೨೦ಮೀ ಉದ್ದ ಹಾಗೂ ೭.೫ಮೀ. ಅಗಲದ ಸೇತುವೆಗೆ ಮತ್ತು ರೂ.೨೦ ಲಕ್ಷ ವೆಚ್ಚದಲ್ಲಿ ಪೇಟೆ ಭಾಗ ಹಾಗೂ ಆರೋಗ್ಯ ಕೇಂದ್ರದ ಬಳಿ ನಿರ್ಮಿಸಲಾಗುವ ಕಾಂಕ್ರೇಟ್ ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ಬೈಂದೂರಿನ ಅನೇಕ ರಸ್ತೆಗಳನ್ನು ಈಗಾಗಲೇ ಕಾಂಕ್ರೀಟಿಕರಣಗೊಳಿಸಲಾಗಿದೆ ಎಂದ ಅವರು ಇನ್ನು ಪಡುವರಿ-ಅಳ್ವೆಕೊಡಿ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು. ಮುಂದಿನ ದಿನಗಳಲ್ಲಿ ಗಂಗೊಳ್ಳಿ, ಗುಜ್ಜಾಡಿ, ತ್ರಾಸಿ, ಅಲೂರು, ನಾಡ ಮುಂತಾದ ಪ್ರದೇಶದ ಅನೇಕ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಿರುವ ಅನುದಾನ ಒದಗಿಸುವುದಾಗಿ ಅವರು ಹೇಳಿದರು.

ಈ ಸಂದರ್ಭ ಜಿಪಂ ಸದಸ್ಯ ಶಂಕರ ಪೂಜಾರಿ, ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಯಡ್ತರೆ ಗ್ರಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಎಇಇ ಲಕ್ಷ್ಮೀನಾರಾಯಣ, ಲೋಕೋಪಯೋಗಿ ಉಲಾಖೆಯ ಜೆಇ ಮಂಜುನಾಥ, ಯಡ್ತರೆ, ಬೈಂದೂರು, ಪಡುವರಿ ಗ್ರಾಪಂ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್, ಕಾರ್ಯದರ್ಶಿ ಬಿ.ಎಂ. ನಾಗರಾಜ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

congress-byndoor1

Leave a Reply