ಮಲ್ಪೆ: ಜಿಲ್ಲಾ ಮೊಗವೀರ ಯುವ ಸಂಘಟನೆ ದಶಮಾನೋತ್ಸವ ಪ್ರಯುಕ್ತ ಮಲ್ಪೆ ಘಟಕದ ವತಿಯಿಂದ ಎ. 19ರಂದು ಮೊಗವೀರ ಕ್ರೀಡಾ ಸಂಗಮ ಮಲ್ಪೆಯ ಗಾಂಧಿ ಶತಾಬ್ದಿ ಮೈದಾನದಲ್ಲಿ ನಡೆಯಲಿದೆ.
ಡಾ| ಜಿ. ಶಂಕರ್ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರದಿಂದ ಮೈದಾನಕ್ಕೆ ಕ್ರೀಡಾಜ್ಯೋತಿಯ ಮೆರವಣಿಗೆ ಸಾಗಿ ಬರಲಿದೆ.
ಮೊಗವೀರ ಸಮಾಜ ಬಾಂಧವರಿಗೆ ಹಗ್ಗಜಗ್ಗಾಟ, ತ್ರೋಬಾಲ್, ವಾಲಿಬಾಲ್, ವೈಯಕ್ತಿಕ ಓಟ, ರಿಲೇ ಓಟ, ಲಾಂಗ್‌ಜಂಪ್, ಹೈಜಂಪ್, ಡಿಸ್ಕಸ್ ತ್ರೋ, ಶಾಟ್‌ಪುಟ್ ಕ್ರೀಡೆಗಳು ಮಹಿಳಾ ಮತ್ತು ಪುರುಷ ಪ್ರತ್ಯೇಕ ವಿಭಾಗದಲ್ಲಿ ನಡೆಯಲಿದೆ.
ಸಾರ್ವಜನಿಕರಿಗೆ ಸ್ಫರ್ಧೆ
ಮಲ್ಪೆ ಬೀಚ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕರಿಗೆ ಜಿಲ್ಲಾ ಮಟ್ಟದ ಮರಳು ಶಿಲ್ಪ ರಚನೆ ಸ್ಪರ್ಧೆ ಏರ್ಪಡಿಸಲಾಗಿದೆ. ಚಿತ್ರಕಲಾ ಸ್ಫರ್ಧೆ ಎರಡು ವಿಭಾಗಗಳಲ್ಲಿ ನಡೆಯಲಿದೆ. ಸಂಜೆ 6 ಗಂಟೆಗೆ ರಾಜ್ಯಮಟ್ಟದ ಅಹ್ವಾನಿತ ತಂಡಗಳಿಂದ ಫಿಲ್ಮ್ ಡ್ಯಾನ್ಸ್ ಸ್ಪರ್ಧೆ ನಡೆಯಲಿದೆ.
ಸಮಾರೋಪ: ಸಮ್ಮಾನ
ಸಂಜೆ ನಡೆಯುವ ಸಮಾರೋಪದಲ್ಲಿ ಡಾ| ಜಿ. ಶಂಕರ್ ಬಹುಮಾನ ವಿತರಿಸಲಿದ್ದು, ಮಲ್ಪೆ ಘಟಕದ ಅಧ್ಯಕ್ಷ ಗಣೇಶ್ ವಿ. ಸಾಲ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಪ್ರಮೋದ್ ಮಧ್ವರಾಜ್, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಸದಾನಂದ ಬಳ್ಕೂರು, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ಪಾಲ್ ಎ. ಸುವರ್ಣ, ಉಚ್ಚಿಲ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಕೇಶವ ಕುಂದರ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮುಂಬೈ ಮೊಗವೀರ ವ್ಯವಸ್ಥಾಪಕ ಮಂಡಳಿ ಅಧ್ಯಕ್ಷ ಅಜಿತ್ ಸುವರ್ಣ, ಮುಂಬೈ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಮಹಾಬಲ ಕುಂದರ್, ಮೀನುಗಾರರ ಸಂಘದ ಅಧ್ಯಕ್ಷ ಹಿರಿಯಣ್ಣ ಟಿ. ಕಿದಿಯೂರು, ಉದ್ಯಮಿಗಳಾದ ಭುವನೇಂದ್ರ ಕಿದಿಯೂರು, ಆನಂದ ಸಿ. ಕುಂದರ್, ಆನಂದ ಪಿ. ಸುವರ್ಣ, ಸಾಧು ಸಾಲ್ಯಾನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಿ. ಮಂಜುನಾಥಯ್ಯ, ನಗರಸಭಾ ಸದಸ್ಯರಾದ ವಿಜಯ ಕುಂದರ್, ನಾರಾಯಣ ಕುಂದರ್, ಪ್ರಶಾಂತ್ ಅಮೀನ್, ಯುವ ಸಂಘಟನೆ ಸ್ಥಾಪಕಾಧ್ಯಕ್ಷ ಸತೀಶ್ ಅಮೀನ್ ಪಡುಕರೆ, ಬೆಂಗಳೂರು ಮೊಗವೀರ ಸಂಘದ ಉಪಾಧ್ಯಕ್ಷ ಶಂಕರ್ ಕುಂದರ್, ಜಿಲ್ಲಾ ಸಂಘಟನೆ ನಿಕಟಪೂರ್ವ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಹಿಳಾ ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್. ಸಾಲ್ಯಾನ್, ಜಿಲ್ಲಾ ಸಂಘಟನೆಯ ಕ್ರೀಡಾ ಕಾರ್ಯದರ್ಶಿ ರವೀಂದ್ರ ಶ್ರೀಯಾನ್, ಮಲ್ಪೆ ಘಟಕದ ಮಹಿಳಾ ಅಧ್ಯಕ್ಷೆ ವಿಶಾಲಾಕ್ಷಿ ರಮೇಶ್, ಮಲ್ಪೆ ಘಟಕದ ಕ್ರೀಡಾ ಕಾರ್ಯದರ್ಶಿ ಪ್ರಶಾಂತ್ ಕರ್ಕೇರ ಮೊದಲಾದವರು ಉಪಸ್ಥಿತರಿರುವರು. ಸಾಧಕರನ್ನು ಸಮ್ಮಾನಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.