ತೆಕ್ಕಟ್ಟೆ: ನಟ ಮಣಿ ಶೆಟ್ಟಿಗೆ ಸನ್ಮಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಸಿನಿಮಾ ನಟ ಮಣಿ ಶೆಟ್ಟಿ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Call us

Click Here

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಣಿ ಶೆಟ್ಟಿ, ನಾನು ಕುವೆಂಪು ಶತಮಾನೋತ್ಸವ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿ ಎನ್ನುವುದಕ್ಕೆ ಹೆಮ್ಮೆ ಇದೆ. ಈ ಶಾಲೆ ನನಗೆ ಬದುಕು ಕಟ್ಟಿ ಕೊಟ್ಟಿದೆ. ಸಿನೇಮಾ ನಟ, ನಾಯಕನಾಗಿ ಬೆಳೆದರೂ ನಾನು ಈ ಶಾಲೆಯನ್ನು ಮರೆಯುವುದಿಲ್ಲ. ಇದು ನನ್ನ ಹೆಮ್ಮೆಯ ಶಾಲೆ. ನನಗೆ ವಿದ್ಯೆ ಕಲಿಸಿದ ಗುರುಗಳನ್ನು ಸದಾ ಸ್ಮರಿಸುತ್ತೇನೆ.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸಂಜೀವ ದೇವಾಡಿಗ, ಕೋಟೇಶ್ವರ ವೃತ್ತ ಶಿಕ್ಷಣ ಸಂಯೋಜಕಿ ಅನಿತಾ, ಮುಖ್ಯ ಶಿಕ್ಷಕಿ ಲಲಿತ, ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಮಲ್ಯಾಡಿ ಸದಾರಾಮ ಶೆಟ್ಟಿ, ನೀಲಾವರ ಸುರೇಂದ್ರ ಅಡಿಗ ಹಾಗೂ ಎಲ್ಲಾ ಅಧ್ಯಾಪಕ ವೃಂದದವರು, ಹಳೆ ವಿದ್ಯಾರ್ಥಿ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕ ವಕ್ವಾಡಿ ವೇಣುಗೋಪಾಲ್ ಹೆಗ್ಡೆರವರು ಸ್ವಾಗತಿಸಿ ಪರಿಚಯಿಸಿದರು. ಶಿಕ್ಷಕಿ ಶರ್ಮಿಳಾ ಜಿ. ರವರು ವಂದಿಸಿದರು.

Leave a Reply