ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ನೆಲಮಂಗಲದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯ ಮಟ್ಟದ ಟೆನ್ನಿಕಾಯ್ಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೊಹಮ್ಮದ್ ಯಾಸಿರ್ ಉತ್ತಮ ನಿರ್ವಹಣೆ ತೋರಿ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಟೆನ್ನಿಕಾಯ್ಟ್ ಪಂದ್ಯಾವಳಿಯಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾನೆ. ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ತರಬೇತಿ ನೀಡಿದ್ದರು. ಸರಸ್ವತಿ ವಿದ್ಯಾಲಯ ಬಳಗ ಯಾಸಿರ್ ಸಾಧನೆಯನ್ನು ಅಭಿನಂದಿಸಿದೆ.
ಟೆನ್ನಿಕಾಯ್ಟ್ ಮೊಹಮ್ಮದ್ ಯಾಸಿರ್ ರಾಷ್ಟ್ರಮಟ್ಟಕ್ಕೆ
