Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಆರ್. ಎನ್. ಶೆಟ್ಟಿ ಪಿಯು ಕಾಲೇಜು ವಾರ್ಷಿಕೋತ್ಸವ
    ಆರ್. ಎನ್. ಶೆಟ್ಟಿ ಪಿಯು ಕಾಲೇಜು ಕುಂದಾಪುರ

    ಕುಂದಾಪುರ: ಆರ್. ಎನ್. ಶೆಟ್ಟಿ ಪಿಯು ಕಾಲೇಜು ವಾರ್ಷಿಕೋತ್ಸವ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಂದಿನ ತಂತ್ರಜ್ಞಾನ ಯುಗದಲ್ಲಿ ಶೈಕ್ಷಣಿಕ ಸಂಸ್ಥೆಗಳಿಗೆ ತಮ್ಮದೇ ಆದ ವೆಬ್‌ಸೈಟ್‌ನ ಅಗತ್ಯತೆ ಇದ್ದು ಇದರಿಂದ ಶೈಕ್ಷಣಿಕ ಸಂಸ್ಥೆಗೆ, ವಿದ್ಯಾರ್ಥಿಗಳಿಗೆ ರಕ್ಷಕರಿಗೆ ಹಾಗೂ ಸಾರ್ವಜನಿಕರಿಗೆ ಪ್ರಯೋಜನವಾಗಲಿದೆ ಎಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಆರ್.ಬಿ.ನಾಯಕ್ ರವರು ಸ್ಥಳೀಯ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಕಾಲೇಜಿನ ವೆಬ್ ಸೈಟ್ ಉದ್ಘಾಟಿಸಿ ಮಾತನಾಡಿದರು

    Click Here

    Call us

    Click Here

    ಇನ್ನೋರ್ವ ಮುಖ್ಯ ಅತಿಥಿ ಮಂಗಳೂರಿನ ಎ.ಜೆ. ಮೆಡಿಕಲ್ ಕಾಲೇಜಿನ ಖ್ಯಾತ ಮಕ್ಕಳ ತಜ್ಞ ಹಾಗೂ ೨೦೧೭ನೇ ಸಾಲಿಗೆ ಇಂಡಿಯನ್ ಪಿಡಿಯಾಟ್ರಿಕ್ಸ್ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ. ಸಂತೋಷ ಟಿ ಸೋನ್ಸ್ ರವರು ಮಾತನಾಡುತ್ತಾ ಇಂದು ದೇಶದ ಮೂಲೆ ಮೂಲೆಗಳಲ್ಲಿ ಶೈಕ್ಷಣಿಕ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಯುವಕ ಯುವತಿಯರು ತಮ್ಮ ಪ್ರಾಮಾಣಿಕತೆ ಹಾಗೂ ಶ್ರದ್ಧೆಯಿಂದ ತಮ್ಮ ಬುದ್ಧಿವಂತಿಕೆಯನ್ನು ಪ್ರದರ್ಶಿಸಿ ತಮ್ಮ ತಮ್ಮ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು. ಕುಂದಾಪುರದವರು ಛಲಗಾರರು, ಬುದ್ಧಿವಂತರು, ಪ್ರಪಂಚದ ಬೇರೆ ಬೇರೆ ಕಡೆಗಳಲ್ಲಿ ನೆಲಸಿ ತಮ್ಮ ಛಾಪನ್ನು ಮೂಡಿಸಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ ಸುಕುಮಾರ ಶೆಟ್ಟಿ ಮಾತನಾಡುತ್ತಾ ಸಮಾಜದ ಎಳಿಗೆಯ ನೆಲೆಯಲ್ಲಿ ನಮ್ಮ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದ್ದು ಪ್ರತಿಯೊಬ್ಬ ವಿದ್ಯಾರ್ಥಿ ಜವಬ್ದಾರಿಯುತವಾಗಿ ತಮ್ಮ ತಮ್ಮ ಕರ್ತವ್ಯಗಳನ್ನು ನಿಭಾಯಿಸಬೇಕು. ಸಂಸ್ಥೆಯ ಆಡಳಿತಮಂಡಳಿ ವಿದ್ಯಾರ್ಥಿಗಳಿಗೆ ಬೇಕಾಗುವ ಎಲ್ಲಾ ವ್ಯವಸ್ಥೆಯನ್ನು ಮಾಡಲು ಸಿದ್ಧವಾಗಿದೆ. ಈ ಸಂಸ್ಥೆಯ ಕೀರ್ತಿ ಇನ್ನಷ್ಟು ಎತ್ತರಕ್ಕೆ ಎರುವಲ್ಲಿ ನೀವೆಲ್ಲರೂ ಕೈಜೋಡಿಸಬೇಕೆಂದರು.

    ಸಂಸ್ಥೆಯ ಉಪಾಧ್ಯಕ್ಷ ಪೋ. ಎ.ಪಿ ಮಿತ್ತಂತ್ತಾಯ ಸ್ವಾಗತ ಮಾಡಿದರು. ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ ಕಾಲೇಜಿನ ವರದಿಯನ್ನು ಮಂಡಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಶ್ರೀಮತಿ ವನಿತಾ ಆಳ್ವ ವಂದಿಸಿದರು. ಕಾರ್ಯಕ್ರಮದಲಿ ಆರ್.ಬಿ.ನಾಯಕ್ ಹಾಗೂ ಡಾ. ಸಂತೋಷ ಸೋನ್ಸ್ ದಂಪತಿಯನ್ನು ಸನ್ಮಾನಿಸಲಾಯಿತು. ಉಪನ್ಯಾಸಕಿಯರಾದ ಜಯಶೀಲಾ ಪೈ ಹಾಗೂ ಲೋನಾ ಲುವಿಸ್ ರವರು ಅತಿಥಿಗಳನ್ನು ಪರಿಚಯಸಿ ಸನ್ಮಾನ ಪತ್ರ ವಾಚಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಸೋಲಮನ್ ಸೋನ್ಸ್ ,ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಜೊತೆ ಕಾರ್ಯದಶಿ ಸುಧಾಕರ ಶೆಟ್ಟಿ ಬಾಂಡ್ಯ, ಸದಸ್ಯರಾದ ಡಾ.ಎಂ.ವಿ ಕುಲಾಲ , ಡಾ.ವೈ.ಎಸ್ ಹೆಗ್ಡೆ, ಕಾಲೇಜು ವಿದ್ಯಾರ್ಥಿ ನಾಯಕ ಸುಮಂತ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಫಾತಿಮಾ ನೂಹ ಹಾಗೂ ಅಮೃತ ಜೆ ಶೆಟ್ಟಿಯವರು ಕಾರ್ಯಕ್ರಮ ನಿರ್ವಹಿಸಿದರು.ಬಹುಮಾನವನ್ನು ಸರಿತಾ ಸೋನ್ಸ್ ರವರು ವಿತರಿಸಿದರು. ಅನುಷಾ ಉಡುಪ, ಅಶ್ವಾನ್ , ನೀತಿ ಶೆಟ್ಟಿ , ವೈಭವಿ ಹಾಗೂ ದೈಹಿಕ ಶಿಕ್ಷಕರಾದ ಪ್ರದೀಪ ಶೆಟ್ಟಿಯವರು ಬಹುಮಾನಿತರ ಪಟ್ಟಿ ವಾಚಿಸಿದರು. ನಂತರ ಸಾಂಸ್ಮ್ಕತಿಕ ಕಾರ್ಯಕ್ರಮಗಳು ಜರಗಿದವು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026
    Leave A Reply Cancel Reply

    8 − one =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.