Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರೈತರದ್ದು ಸಮಸ್ಯೆಗೆ ದೃತಿಗೆಡದ ಸ್ವಾಭಿಮಾನಿ ಬದುಕು
    ಊರ್ಮನೆ ಸಮಾಚಾರ

    ರೈತರದ್ದು ಸಮಸ್ಯೆಗೆ ದೃತಿಗೆಡದ ಸ್ವಾಭಿಮಾನಿ ಬದುಕು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಖಂಬದಕೋಣೆ ರೈತರ ಸೇವಾ ಸಂಘ, ಸಂಘವು ಪ್ರಾಯೋಜಿಸಿರುವ ರೈತ ಶಕ್ತಿ ಹಾಗೂ ರೈತ ಸೇವಾ ಕೂಟ ಉಪ್ಪುಂದ ಇವರ ಜಂಟಿ ಆಶ್ರಯದಲ್ಲಿ ಇಲ್ಲಿನ ಶಂಕರ ಕಲಾ ಮಂದಿರ ಸಮೃದ್ಧ್ ಸಭಾಭವನದಲ್ಲಿ ರೈತ ದಿನಾಚರಣೆ ಜರುಗಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಉದ್ಘಾಟಿಸಿದ ಮರವಂತೆಯ ಹಿರಿಯ ಕೃಷಿಕ ಹಾಗೂ ನಿವೃತ್ತ ಪ್ರಾಧ್ಯಾಪಕ ಎ. ರಿಚರ್ಡ್ ರೆಬೆಲ್ಲೊ ಮಾತನಾಡಿ, ರೈತರದ್ದು ಸ್ವಾಭಿಮಾನದ ಬದುಕಾಗಿದ್ದು, ಸಮಸ್ಯೆಗಳಿಗೆ ಧೃತಿಗೆಡದೆ ಜೀವನ ಸಾಗಿಸುವ ರೈತರ ಜೀವನ ಇತರರಿಗೆ ಮಾದರಿಯಾಗಿದೆ. ಇಂದು ರೈತರ ಹೆಸರು ಬಳಸಿಕೊಂಡು ವೈಭವಿಕರಣದ ವ್ಯಾಪಾರೀಕರಣ ನಡೆಯುತ್ತಿದೆ. ಆದರೆ ನಿಜವಾದ ರೈತರ ಸ್ಥಿತಿ ಚಿಂತಜನಕವಾಗಿದೆ ಎಂದರು.

    ಬೆವರು ಹರಿಸಿ ದುಡಿಯುವ ರೈತರು ತಮ್ಮ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆಯಿಲ್ಲದೇ ನಲುಗಿ ಹೋಗಿದ್ದಾರೆ. ಬಡತನದ ಬೇಗುದಿ, ಸಾಲದ ಬಾಧೆಯಿಂದ ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇವರ ಬೆಂಬಲಕ್ಕೆ ಸರಕಾರಗಳು ನಿಲ್ಲಬೇಕು. ಇವರ ಬೆಳೆಗೆ ದರನಿಗದಿ ಮಾಡುವ ಮದ್ಯವರ್ತಿಗಳ ಹಾವಳಿಯಿಂದ ತಪ್ಪಿಸಿ ಮಾರುಕಟ್ಟೆಯಲ್ಲಿ ಇವರಿಗೆ ನೇರವಾಗಿ ಸೂಕ್ತಬೆಲೆ ಸಿಗಬೇಕು. ಕೇವಲ ತಮ್ಮ ರಾಜಕೀಯ ಲಾಭಕ್ಕಾಗಿ ರೈತ ದೇಶದ ಆಸ್ತಿ, ಬೆನ್ನಲಬು, ಅನ್ನದಾತ ಎಂದೆಲ್ಲ ವೇದಿಕೆಯ ಮೇಲೆ ಬೊಗಳೆ ಬಿಡುವುದಕ್ಕಿಂತ ಇಲಾಖಾ ಅಧಿಕಾರಿಗಳಿಂದ ರೈತರಿಗೆ ಸರಿಯಾದ ಅಂಕಿ-ಅಂಶಗಳಿಂದ ಕೂಡಿದ ಬೇಸಾಯದ ಕುರಿತು ಮಾರ್ಗದರ್ಶನ ಕೊಡಿಸಬೇಕು ಎಂದರು.

    ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲ್ತೋಡು ಗ್ರಾಪಂ ವ್ಯಾಪ್ತಿಯ ಬೊಳಂಬಳ್ಳಿ ಹಿರಿಯ ಪ್ರಗತಿಪರ ರೈತ ಮಂಜ ಗೌಡ ಇವರನ್ನು ಸನ್ಮಾನಿಸಲಾಯಿತು ಕುಂದಾಪುರ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷ ಮಾಣಿಬೈಲು ಗೋಪಾಲ ಶೆಟ್ಟಿ, ಬಿಜೂರು ಗ್ರಾಪಂ ಅಧ್ಯಕ್ಷೆ ಲೋಲಾಕ್ಷಿ ದೇವಾಡಿಗ, ಕಾಲ್ತೋಡು ಗ್ರಾಪಂ ಉಪಾಧ್ಯಕ್ಷ ರಾಜು ಪೂಜಾರಿ, ಸಂಘದ ನಿರ್ದೇಶಕರಾದ ಮೊಹನ್ ಪೂಜಾರಿ, ದಿನಿತಾ ಶೆಟ್ಟಿ, ಗುರುರಾಜ್ ಹೆಬ್ಬಾರ್, ಸಿದ್ದು ದೇವಾಡಿಗ ಉಪಸ್ಥಿತರಿದ್ದರು. ನಿರ್ದೇಶಕ ಬಿ.ಎಸ್.ಸುರೇಶ್ ಶೆಟ್ಟಿ ಪ್ರಾಸ್ತಾವಿಸಿದರು. ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೈ ಸ್ವಾಗತಿಸಿ, ವ್ಯವಸ್ಥಾಪಕ ಹಾವಳಿ ಬಿಲ್ಲವ ವಂದಿಸಿದರು. ಸುಬ್ರಹ್ಮಣ್ಯ ಗಾಣಿಗ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    5 × four =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.