ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ತಂತ್ರಜ್ಞಾನ ಬದಲಾದ ಹಾಗೆ ಉದ್ಯಮಗಳೂ ಬದಲಾವಣೆಯಾಗುತ್ತದೆ. ಜನರ ಬೇಡಿಕೆಗೆ ಅನುಗುಣವಾಗಿ ತಮ್ಮ ಉದ್ಯಮವನ್ನು ಬದಲಾವಣೆ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಕರ್ನಾಟಕ ಅಸೋಸಿಯೇಸನ್ ಆಫ್ ಸೈನೇಜ್ ಇಂಡಸ್ಟ್ರೀಸ್‌ನ ಪ್ರಧಾನ ಕಾರ್ಯದರ್ಶಿ ರವಿ ನಾಗರಾಜ್ ಹೇಳಿದರು.
ಅವರು ಇತ್ತೀಚೆಗೆ ಉಡುಪಿಯ ಹೊಟೇಲ್ ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ನೂತ ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ (ರಿ) ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ ವ್ಯಾಪಾರದಲ್ಲಿ ಗುಣಮಟ್ಟ ಮತ್ತು ಪ್ರಾಮಾಣಿಕತೆಯನ್ನು ಉಳಿಸಬೇಕು. ವ್ಯಾಪಾರದಲ್ಲಿ ಸ್ಪರ್ಧೆಗಳು ಗುಣಮಟ್ಟದಲ್ಲಿ ಇರಬೇಕು. ಪ್ರತಿಯೊಬ್ಬರೂ ಈ ನಿಟ್ಟಿನಲ್ಲಿ ಚಿಂತಿಸಬೇಕಾಗಿದೆ ಎಂದವರು ಸಲಹೆಯಿತ್ತರು.
ರಾಜೇಶ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಅಸೋಸಿಯೇಶನ್‌ನ ಲೆಟರ್ಹೆಡ್, ಐಡಿ ಕಾರ್ಡ್, ದರಪಟ್ಟಿಯನ್ನು ಬಿಡುಗಡೆ ಮಾಡಲಾಯಿತು. ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ ಅಸೋಸಿಯೇಶನ್ ಅಧ್ಯಕ್ಷ ದಾಮೋದರ್ ಪೈ ಅಧ್ಯಕ್ಷತೆ ವಹಿಸಿದ್ದರು. ದ.ಕ ಜಿಲ್ಲಾ ಲಾರ್ಜ ಫಾರ್ಮ್ಯಾಟ್ ಪ್ರಿಂಟರ್ಸ್ ಅಸೋಸಿಯೇಶನ್ ಅಧ್ಯಕ್ಷ ಎಂ. ಜಯರಾಮ ಶೆಟ್ಟಿ, ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ಕಾನೂನು ಸಲಹೆಗಾರ ವಿವೇಕ್ ಯು, ಗೌರವಾಧ್ಯಕ್ಷ ಅಕ್ಬರ್ ಎಸ್.ಕೆ, ಸಂಘಟನಾ ಕಾರ್ಯದರ್ಶಿ ರಾಜೇಶ್ ಕುಮಾರ್, ಕಾರ್ಯದರ್ಶಿಗಳಾದ ಮಧುಸೂದನ ಮಲ್ಪೆ, ಆನಂದ ನಾಯ್ಡು ಉಪಸ್ಥಿತರಿದ್ದರು.