ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ೨೦೧೬-೧೭ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ಹೊಸೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆಯಲ್ಲಿ ನಡೆಯಿತು.
ಶ್ರೀ ಕ್ಷೇತ್ರ ಮಾರಣಕಟ್ಟೆ ದೇವಳದ ಅನುವಂಶಿಕ ಆಡಳಿತ ಮೋಕ್ತೆಸರರಾದ ಸದಾಶಿವ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ. ಎಮ್. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಹಂಚಿನಮನೆ, ಮರ್ಡಿ ವಿ. ಶಿವರಾಮ ಶೆಟ್ಟಿ, ಶ್ರೀ ಮೂಕಾಂಬಿಕಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರ ಶೆಟ್ಟಿ, ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ವಂಡ್ಸೆಯ ನಿರ್ದೇಶಕರಾದ ಜಗನ್ನಾಥ ಶೆಟ್ಟಿ, ಉದ್ಯಮಿಗಳಾದ ನಡಾಡಿ ಗಣೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ದೇವಲ್ಕುಂದ ಅಶೋಕ್ ಶೆಟ್ಟಿ, ಹೆಚ್.ಎಮ್.ಎಮ್. ಶಾಲೆಯ ಶಿಕ್ಷಕ ಹೊಸೂರು ಚಂದ್ರಶೇಖರ ಶೆಟ್ಟಿ, ವಿದ್ಯಾರ್ಥಿ ಸ್ವಯಂಸೇವಕ ಪ್ರತಿನಿಧಿಗಳಾದ ಮಂಜುನಾಥ ಹೊಳ್ಳ, ಶಬರಿ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ದೋಮ ಚಂದ್ರಶೇಖರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು, ಸಹಯೋಜನಾಧಿಕಾರಿ ಪ್ರೀತಿ ಹೆಗ್ಡೆ ವಂದಿಸಿದರು. ಶಿಬಿರಾಧಿಕಾರಿ ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ನಿರೂಪಿಸಿದರು.