ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಆಶ್ರಯದಲ್ಲಿ ಬಿಸುಪರ್ಬ ಹಾಗೂ ಬಂಟರ ದಿನಾಚರಣೆಯು ಎ. 14 ರಂದು ಪೂರ್ವಾಹ್ನ ಉದ್ಘಾಟನೆಗೊಂಡಿತು. ಪೂರ್ವಾಹ್ನ 9.30ರಿಂದ ಸಂಘದ ಆವರಣದಲ್ಲಿರುವ ಶ್ರೀ ಮಹಾವಿಷ್ಣು ಮಂದಿರದಲ್ಲಿ ವಿಶೇಷ ಪೂಜೆ ನೆರವೇರಿದ ಬಳಿಕ ಗಣಪತಿ ಸ್ತುತಿಯೊಂದಿಗೆ ಪೂಜಾನೃತ್ಯ ಜರಗಿತು. ಆನಂತರ ಸಂಘದ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಜ್ಯೋತಿ ಬೆಳಗಿಸಿ ವಿಶ್ವಬಂಟರ ದಿನಕ್ಕೆ ಚಾಲನೆ ನೀಡಿದರು.
ಮುಖ್ಯ ಅತಿಥಿಯಾಗಿ ಬಂಟರ ಸಂಘ ಬಳ್ಳಾರಿ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಗೌರವ ಅತಿಥಿಯಾಗಿ ಬಂಟರ ಸಂಘ ಪಡುಬಿದ್ರಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ ಉಪಸ್ಥಿತರಿದ್ದರು. ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ ನೇತೃತ್ವದಲ್ಲಿ ಜರಗಿದ ಸಮಾರಂಭದಲ್ಲಿ ಜಾಗತಿಕ ಬಂಟರ ಒಕ್ಕೂಟದ ಉಪಾಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಸಂಘದ ಉಪಾಧ್ಯಕ್ಷ ಪ್ರಭಾಕರ ಎಲ್. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಉಳೂ¤ರು ಮೋಹನದಾಸ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ಐ. ಆರ್. ಶೆಟ್ಟಿ, ಜತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಕುತ್ಯಾರ್, ಜತೆ ಕೋಶಾಧಿಕಾರಿ ಮಹೇಶ್ ಎಸ್. ಶೆಟ್ಟಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಜೆ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ವಿವೇಕ್ ವಿ. ಶೆಟ್ಟಿ ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಶ್ರೀ ಮಹಾವಿಷ್ಣು ಕೃಪಾ ಬಂಟ ಯಕ್ಷಕಲಾ ವೇದಿಕೆಯು ಸಂಘದ ಮೂಲಕ ಪ್ರತಿವರ್ಷ ಅತ್ಯುತ್ತಮ ಯಕ್ಷಗಾನ ಕಲಾವಿದ ಸಾಧಕರಿಗೆ ನೀಡುವ ಕಣಂಜಾರು ಆನಂದ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿಯನ್ನು ಈ ವರ್ಷ ಯಕ್ಷಗಾನ ಕಲಾವಿದ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಅವರಿಗೆ ಹಾಗೂ ಶ್ರೀಮತಿ ಪ್ರೇಮಾ ನಾರಾಯಣ ರೈ ಪ್ರಶಸ್ತಿಯನ್ನು ಯಕ್ಷಗಾನ ಕಲಾವಿದೆ, ಲೇಖಕಿ ದಯಾಮಣಿ ಶೆಟ್ಟಿ ಅವರಿಗೆ ಗಣ್ಯರು ಪ್ರದಾನಿಸಿದರು.
ಚಿತ್ರ, ವರದಿ : ಪ್ರೇಮನಾಥ ಶೆಟ್ಟಿ ಮುಂಡ್ಕೂರು