ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದುರ್ಮಿ ತಿರಂಗಾ ಫೆಂಡ್ಸ್ ಇದರ ಮೂರನೇ ವಾರ್ಷಿಕೋತ್ಸವ ದುರ್ಮಿಯಲ್ಲಿ ಜರುಗಿತು. ಹಿಂದೂ ಹಾಗೂ ಕ್ರೈಸ್ತ ಸಮುದಾಯದವರು ಈ ಪ್ರದೇಶದಲ್ಲಿ ಅನ್ಯೂನ್ಯತೆಯಿಂದ ವಾಸಿಸುತ್ತಿದ್ದು ಪ್ರತಿವರ್ಷ ಹೊಸವವರ್ಷದ ಸಂದರ್ಭದಲ್ಲಿ ತಿಂರಂಗಾ ಫ್ರೆಂಡ್ಸ್ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ.
ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಡುವರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ದೀಪಾ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಮಾಣಿಕ್ಯ ಹೋಬಳಿದಾರ್ ಮೊದಲಾದವರು ಉಪಸ್ಥಿತರಿದ್ದರು. ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.