ಹೊಸೂರಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಸಂಪನ್ನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ೨೦೧೬-೧೭ನೇ ಶೈಕ್ಷಣಿಕ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಹೊಸೂರಿನ ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆಯಲ್ಲಿ ಡಿಸೆಂಬರ್ ೩೦ರಂದು ನಡೆಯಿತು.

Call us

Click Here

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚು ಗಮನ ಕೊಡಬೇಕು. ಇಂತಹ ಎನ್.ಎಸ್.ಎಸ್. ಶಿಬಿರಗಳು ಭವಿಷ್ಯದಲ್ಲಿ ವಿದ್ಯಾರ್ಥಿಗಳಿಗೆ ಬದುಕಿನ ಶಿಕ್ಷಣವನ್ನು ನೀಡುತ್ತದೆ. ಸಮಾಜದ ಕಟ್ಟಕಡೆಯ ಮಗು ಶಿಕ್ಷಣ ಪಡೆದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಮಧ್ಯಮ ಮತ್ತು ಕೆಳಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡುವುದೇ ನಮ್ಮ ಸಂಸ್ಥೆಗಳ ಮುಖ್ಯ ಧ್ಯೇಯ ಎಂದು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಬಿ.ಎಮ್. ಸುಕುಮಾರ ಶೆಟ್ಟಿ ಸಮಾರೋಪ ಭಾಷಣದಲ್ಲಿ ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯತ್ ಸದಸ್ಯ ದೇವಲ್ಕುಂದ ಅಶೋಕ ಶೆಟ್ಟಿ, ಹೊಸೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಚಂದ್ರ ಶೆಟ್ಟಿ, ಉದ್ಯಮಿ ಕಾನ್‌ಬೇರು ಜಯರಾಮ ಶೆಟ್ಟಿ, ಉದ್ಯಮಿ ಸುಂದರ್ ಶೆಟ್ಟಿ ಹೊಸೂರು, ಹೆಚ್.ಎಮ್.ಎಮ್. ಶಾಲೆಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಹೊಸೂರು, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನಿರ್ದೇಶಕರಾದ ಶ್ರೀಮತಿ ನಾಗರತ್ನ ಶೆಟ್ಟಿ, ಚಂದ್ರಯ್ಯ ಆಚಾರ್ ಕಳಿ, ಎನ್.ಎಸ್.ಎಸ್. ಸಹಯೋಜನಾಧಿಕಾರಿ ಪ್ರೀತಿ ಹೆಗ್ಡೆ, ಸ್ವಯಂಸೇವಕ ಪ್ರತಿನಿಧಿಗಳಾದ ಮಂಜುನಾಥ ಹೊಳ್ಳ, ಶಬರಿ ಉಪಸ್ಥಿತರಿದ್ದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿದರು. ವಾಣಿಜ್ಯ ಉಪನ್ಯಾಸಕ ಶಿವರಾಜ್ ದೇವಾಡಿಗ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ನಿರೂಪಿಸಿದರು.

 

Click here

Click here

Click here

Click Here

Call us

Call us

Leave a Reply