ಡಾ. ಬಿ. ಬಿ. ಹೆಗ್ಡೆ ಕಾಲೇಜು: ಸಂಶೋಧನಾ ಮತ್ತು ಉದ್ಯಮಶೀಲತಾಭಿವೃದ್ಧಿ ಕೇಂದ್ರದ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉದ್ಯಮ ಶೀಲತೆ ಎನ್ನುವುದು ಒಂದು ನಿರಂತರ ಪ್ರಕ್ರಿಯೆ. ಇಲ್ಲಿ ಒಬ್ಬ ಉದ್ಯಮಿಯು ಪ್ರಾಯೋಗಿಕ ಚಿಂತನೆಗೆ ಹೆಚ್ಚಿನ ಮಹತ್ವವನ್ನು ನೀಡಬೇಕು. ಕೆಲವು ಉದ್ಯಮಿಗಳ ಯಶಸ್ಸಿನ ಗುಟ್ಟನ್ನು ಅರಿವುದರ ಜೊತೆಗೆ ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವಶ್ಯಕ ಎಂದು ಸೈಂಟ್ ಮೇರಿಸ್ ಕಾಲೇಜು, ಶಿರ್ವ ಇದರ ವಾಣಿಜ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಗಣೇಶ್ ಭಟ್ ಎಸ್. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು.

Call us

Click Here

ಇವರು ಕಾಲೇಜಿನ ಸಂಶೋಧನಾ ಮತ್ತು ಉದ್ಯಮಶೀಲತಾಭಿವೃದ್ದಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಘಟಕದ ಸಂಯೋಜಕಿ ಅನ್ವಿತಾ, ವಾಣಿಜ್ಯ ವಿಭಾಗದ ಮೂಖ್ಯಸ್ಥರಾದ ರಾಜೇಶ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಯನ ಸ್ವಾಗತಿಸಿದರು. ವಿದ್ಯಾರ್ಥಿನಿ ಶೈಲಜಾ ಉದ್ಘಾಟಕರನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಸರಸ್ವತಿ ವಂದಿಸಿದರು. ವಿದ್ಯಾರ್ಥಿನಿ ಶ್ರೀವಿಭಾ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply