ಡಾ. ಬಿ.ಬಿ ಹೆಗ್ಡೆ ಕಾಲೇಜು ಹಳೆ ವಿದ್ಯಾರ್ಥಿ ಸಂಘ ಉದ್ಘಾಟನೆ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಸಂಘಟನೆ ಪೂರಕವಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಕಾಲೇಜಿನ ಎಲ್ಲಾ ಹಳೆ ವಿದ್ಯಾರ್ಥಿಗಳು ಒಗ್ಗೂಡಿ ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಕೈಜೋಡಿಸಬೇಕೆಂದು ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು.

Call us

Click Here

ಅವರು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ತಮ್ಮ ಕಾಲೇಜು ದಿನಗಳ ಮಧುರ ಕ್ಷಣಗಳನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಖರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಳೆ ವಿದ್ಯಾರ್ಥಿ ಸಂಘದ ಸಂಯೋಜಕರಾದ ರಾಜೇಶ್ ಶೆಟ್ಟಿ, ವಾಣಿಜ್ಯ ವಿಭಾಗದ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಹಳೆ ವಿದ್ಯಾರ್ಥಿಗಳು, ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ತಿಲಕಲಕ್ಷ್ಮೀ ಸ್ವಾಗತಿಸಿದರು, ವೀಣಾ ಭಟ್ ವಂದಿಸಿದರು, ವಿಘ್ನೇಶ್ವರ್ ರಾವ್ ಕಾರ್ಯಕ್ರಮ ನಿರೂಪಿಸಿದರು.

Leave a Reply