ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ : ಮೈಸೂರು ಪ್ರಗತಿಪರ ಪ್ರಕಾಶನ ಹಾಗೂ ಗ್ರಾಮಾಂತರ ಬುದ್ದಿಜೀವಿಗಳ ಬಳಗ ನೀಡುವ ವಿಶ್ವಮಾನ್ಯ ಕನ್ನಡಿಗ ಪ್ರಶಸ್ತಿಗೆ ಉಪನ್ಯಾಸಕ ಅಂಪಾರು ನಿತ್ಯಾನಂದ ಶೆಟ್ಟ ಆಯ್ಕೆ ಆಗಿದ್ದಾರೆ.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜ್ ಕನ್ನಡ ಉಪನ್ಯಾಸಕ ನಿತ್ಯಾನಂದ ಶೆಟ್ಟಿ ರಾಷ್ಟ್ರೀಯ ಭ್ರಷ್ಟಾಚಾರ ನಿರ್ಮೂಲನ ಸಂಸ್ಥೆ, ನವದೆಹಲಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿದ್ದು, ಕುಂದಾಪುರ ತಾಲೂಕ್ ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದರು. ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ ಅಧ್ಯಕ್ಷ, ವೈದೇಹಿ ಕತೆಗಳಲ್ಲಿ ಪ್ರಾದೇಶಿಕ ಸಂಸ್ಕೃತಿ ಇವರ ಪ್ರಕಟಿತ ಕೃತಿ. ಜನವರಿ ಅಂತ್ಯದ ವೇಳೆಗೆ ಮೈಸೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುತ್ತದೆ.