ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ‘ತೆರೆದ ಮನೆ’ ಕಾರ್ಯಕ್ರಮ. ವಿದ್ಯಾರ್ಥಿಗಳೊಂದಿಗೆ ಸಂವಾದ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ : ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಪೊಲೀಸರೊಂದಿಗೆ ಮುಕ್ತವಾಗಿ ಹಂಚಿಕೊಂಡಾಗ ಸಾರ್ವಜನಿಕರು ಹಾಗೂ ಪೊಲೀಸರ ನಡುವಿನ ಸಂಬಂಧವನ್ನು ಉತ್ತಮಗೊಳಿಸಲು ಸಾಧ್ಯವಾಗುತ್ತದೆ. ಪೊಲೀಸ್ ಠಾಣೆಗೆ ಬರಲು ಯಾವುದೇ ಅಂಜಿಕೆ ಪಡದೆ ತಮಗಾಗುತ್ತಿರುವ ಅನ್ಯಾಯವನ್ನು ಸಂಬಂಧಪಟ್ಟ ಠಾಣಾಧಿಕಾರಿಯವರಿಗೆ ಲಿಖಿತವಾಗಿ ನೀಡಬೇಕು. ವಿದ್ಯಾರ್ಥಿಗಳು ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಮಾಹಿತಿಯನ್ನು ಪಡೆದುಕೊಂಡು, ಪೊಲೀಸ್ ಇಲಾಖೆಯಂದಿಗೆ ಸಹಕರಿಸಿದಾಗ ಸಮಾಜವನ್ನು ಅಪರಾಧಮುಕ್ತ ಸಮಾಜವನ್ನಾಗಿ ಮಾಡಲು ಸಾಧ್ಯವಾಗುತ್ತದೆ ಎಂದು ಗಂಗೊಳ್ಳಿ ಪೊಲೀಸ್ ಠಾಣಾ ಉಪನಿರೀಕ್ಷಕ ಸುಬ್ಬಣ್ಣ ಹೇಳಿದರು.

Call us

Click Here

ಅವರು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಜರಗಿದ ‘ತೆರೆದ ಮನೆ’ ಕಾರ್ಯಕ್ರಮದಲ್ಲಿ ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಸಾರ್ವಜನಿಕ ಸ್ಥಳದಲ್ಲಿ ಬೀಡಿ ಸಿಗರೇಟ್ ಸೇವನೆ ಶಿಕ್ಷಾರ್ಹ ಅಪರಾಧ. ಮಟ್ಕಾ, ಜುಗಾರಿ, ಕೋಳಿ ಅಂಕದ ಆಟ, ಬೆಟ್ಟಿಂಗ್ ಮೊದಲಾದವುಗಳು ಕಾನೂನಿನ್ವಯ ಅಪರಾಧ. ಇಂತಹ ಪ್ರಕರಣಗಳು ಅಥವಾ ಯಾವುದೇ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಶಾಲೆಗಳಲ್ಲಿ ಅಥವಾ ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರೆ ನೇರವಾಗಿ ಠಾಣೆಯಲ್ಲಿ ದೂರು ದಾಖಲಿಸಬೇಕು. ಸಂಶಯಾಸ್ಪದ ವ್ಯಕ್ತಿಗಳು ಯಾ ಸಂಶಯಾಸ್ಪದ ವಸ್ತುಗಳು ಕಂಡು ಬಂದರೆ ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳು ಸ್ವಾರಸ್ಯಕರ ಚರ್ಚೆ ನಡೆಸಿದರು. ಮರವಂತೆ ವ್ಯಾಪ್ತಿಯ ಕೆಲವೆಡೆ ಮಟ್ಕಾ ಜುಗಾರಿ ಆಟ ಹೆಚ್ಚಾಗುತ್ತಿದೆ. ಆದರೆ ಪೊಲೀಸರು ಅವರಿಗೆ ಯಾವುದೇ ಶಿಕ್ಷೆ ನೀಡುದಿಲ್ಲ. ಯಾವುದೇ ಘಟನೆ ನಡೆದ ಸಂದರ್ಭ ದೂರು ನೀಡಲು ಏನು ಮಾಡಬೇಕು. ಪ್ರಕರಣದಲ್ಲಿ ಸಾಕ್ಷಿದಾರರಿಗೆ ಪದೇ ಪದೇ ಅಲೆದಾಡುವುದನ್ನು ತಪ್ಪಿಸಲು ಯಾವ ಕ್ರಮಕೈಗೊಳ್ಳುತ್ತೀರಿ. ಶಾಲಾ ವಿದ್ಯಾರ್ಥಿನಿಯರು ಸೈಕಲಿನಲ್ಲಿ ಹೋಗುವಾಗ ಕೆಲವರು ತಮ್ಮ ವಾಹನವನ್ನು ವೇಗವಾಗಿ ಚಲಾಯಿಸಿ ತೊಂದರೆ ನೀಡುತ್ತಿದ್ದಾರೆ. ಇದನ್ನು ಕೊನೆಗಾಣಿಸಲು ಏನು ಮಾಡಬೇಕು. ವಿದ್ಯಾರ್ಥಿಗಳು ರಸ್ತೆ ದಾಟುವ ಸ್ಥಳಗಳಲ್ಲಿ ಝಿಬ್ರಾ ಕ್ರಾಸಿಂಗ್ ಮತ್ತು ನಾಮಫಲಕ ಅಳವಡಿಸಲು ಕ್ರಮಕೈಗೊಳ್ಳಬೇಕು ಎಂಬಿತ್ಯಾದಿ ಪ್ರಶ್ನೆಗಳ ಸುರಿಮಳೆಗೈದರು ಹಾಗೂ ಫೋಕ್ಸೊ ಕಾಯ್ದೆ ಬಗ್ಗೆ ಮಾಹಿತಿ ಪಡೆದುಕೊಂಡರು. ಇಲಾಖೆಯ ಬಗ್ಗೆ ವಿವಿಧ ಮಾಹಿತಿಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳು ಪೊಲೀಸರು ಉಪಯೋಗಿಸುವ ರೈಫಲ್, ಗನ್, ತೋಳ ಮೊದಲಾದವುಗಳ ಉಪಯೋಗಿಸುವ ಬಗ್ಗೆ ಮಾಹಿತಿ ಪಡೆದು.

ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸತ್ಯನಾ ಕೊಡೇರಿ, ತಾಲೂಕು ಶಿಕ್ಷಣ ಸಂಯೋಜಕಿ ಶೈಲಾ ನಾಯಕ್, ಉಡುಪಿ ಜಿಲ್ಲಾ ಶಿಕ್ಷಣ ಸಂಪನ್ಮೂಲ ಸಂಸ್ಥೆಯ ಅಧ್ಯಕ್ಷ ರಾಘವೇಂದ್ರ ನಾವಡ, ತಾಲೂಕು ಶಿಕ್ಷಣ ಸಂಪನ್ಮೂಲ ಸಂಸ್ಥೆಯ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ, ಗಂಗೊಳ್ಳಿ ಠಾಣೆಯ ಎಎಸ್ಸೈ ರಘುರಾಮ, ಹೆಡ್ ಕಾನ್‌ಸ್ಟೇಬಲ್ ಮೋಹನ ಪೂಜಾರಿ, ಸೂರ, ಸಿಬ್ಬಂದಿಗಳಾದ ಚಂದ್ರಶೇಖರ, ನರಸಿಂಹ, ಚೇತನ್ ಮೊದಲಾದವರು ಉಪಸ್ಥಿತರಿದ್ದರು. ಹೆಡ್ ಕಾನ್‌ಸ್ಟೇಬಲ್ ಆನಂದ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Leave a Reply