ಕೊಲ್ಲೂರಿಗೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಭೇಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕಾರ್ಯನಿರ್ವಹಣಾಧಿಕಾರಿ ಎಸ್. ಯೋಗೇಶ್ವರ ಮತ್ತು ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಚ್. ಕೃಷ್ಣಮೂರ್ತಿ ಸಚಿವ ದಂಪತಿಗಳನ್ನು ಸ್ವಾಗತಿಸಿ ಗೌರವಿಸಿದರು.

Call us

Click Here

ಕಂಬಳ ಉಳಿವಿಗೆ ಮನವಿ:
ಸ್ಥಳೀಯ ಬಿಜೆಪಿ ಮುಖಂಡರು ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೂ ಸುಗ್ರೀವಾಜ್ಞೆ ಹೊರಡಿಸಿ ಕಾನೂನು ಅನುಮತಿ ದೊರಕಿಸಿಕೊಂಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಜಿಲ್ಲಾಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಯಶಪಾಲ್ ಸುವರ್ಣ, ಬೈಂದೂರು ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು, ಯುವ ಮೋರ್ಚ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ವಕೀಲರಾದ ಕೆ.ಬಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply