ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ತಿಂಗಳ ಕಾರ್ಯಕ್ರಮದ ಅಂಗವಾಗಿ ಧರ್ಮಶ್ರೀ ರಿಲೀಫ್ ಫೌಂಡೇಶನ್ (ರಿ) ಮಟ್ನಕಟ್ಟೆ ಆಶ್ರಯದಲ್ಲಿ ಸ್ತುತಿ ಇವೆಂಟ್ ಮ್ಯಾನೇಜ್‌ಮೆಂಟ್ (ರಿ) ಸಹಭಾಗಿತ್ವದಲ್ಲಿ ಕಲಾ ಕುಸುಮಾಂಜಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಧರ್ಮಶ್ರೀ ರಿಲೀಫ್ ಫೌಂಡೇಶನ್‌ನ ಅಧ್ಯಕ್ಷ ನಾಗರಾಜ ಸುವರ್ಣ ಅವರನ್ನು ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ಉದ್ಯಮಿ ಧೀರಜ್ ಹೆಜಮಾಡಿ, ಮೂಡುಬಗೆಯ ವಾಗ್ಜೋತಿ ಶಾಲೆಯ ಪ್ರಾಂಶುಪಾಲರಾದ ರವೀಂದ್ರ ಎಚ್, ನಿವೃತ್ತ ಶಿಕ್ಷಕ ಸದಾಶಿವ ಐತಾಳ್, ಸ್ತುತಿ ಇವೆಂಟ್ ಮ್ಯಾನೇಜ್‌ಮೆಂಟ್‌ನ ಮುಖ್ಯಸ್ಥ ಗಣೇಶ್ ಆರ್.ಎಂ ಇನ್ನಿತರರು ಉಪಸ್ಥಿತರಿದ್ದರು.
ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಅಧ್ಯಕ್ಷ ಭಾಸ್ಕರ ಕೊಗ್ಗ ಕಾಮತ್ ಸ್ವಾಗತಿಸಿದರು. ಶಿಕ್ಷಕ ನಾಗೇಶ್ ಶ್ಯಾನುಭಾಗ್ ಕಾರ್ಯಕ್ರಮ ನಿರ್ವಹಿಸಿದರು. ರಾಜೇಂದ್ರ ಪೈ, ಮಂಜುನಾಥ ಮೈಪಾಡಿ ಸಹಕರಿಸಿದರು.










